ಕುಂಭಮೇಳಕ್ಕೆ “ಅವ್ಯಕ್ತ ಸಾಂಸ್ಕೃತಿಕ ಪರಂಪರೆ’ ಗೌರವ
Team Udayavani, Dec 8, 2017, 11:29 AM IST
ಹೊಸದಿಲ್ಲಿ: ಪ್ರತಿ 4 ವರ್ಷಗಳಿಗೊಮ್ಮೆ ನಡೆಯುವ ಭಾರತದ ವಿಶ್ವಪ್ರಸಿದ್ಧ ಕುಂಭಮೇಳ ಇದೀಗ “ಮಾನವತೆಯ ಅವ್ಯಕ್ತ ಸಾಂಸ್ಕೃತಿಕ ಪರಂಪರೆ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಗೋಚರ ಪರಂಪರೆಯ ಪಟ್ಟಿಗೆ ಕುಂಭಮೇಳವನ್ನೂ ಸೇರಿಸಿರುವುದಾಗಿ ಯುನೆಸ್ಕೋ ಗುರುವಾರ ಘೋಷಿಸಿದೆ.
ದಕ್ಷಿಣ ಕೊರಿಯಾದ ಜೆಜುವಿನಲ್ಲಿ ನಡೆದ ಯುನೆಸ್ಕೋದ 12ನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಜಗತ್ತಿನಲ್ಲೇ ಧಾರ್ಮಿಕ ಯಾತ್ರಿಗಳ ಅತಿದೊಡ್ಡ ಸಮಾಗಮ ಎಂದೇ ಪರಿಗಣಿಸಲ್ಪಟ್ಟಿರುವ ಕುಂಭಮೇಳವು ಇದೀಗ ಬೋಟ್ಸ್‌ವಾನಾ, ಕೊಲಂಬಿಯಾ, ವೆನಿಜುವೆಲಾ, ಮಂಗೋ ಲಿಯಾ, ಮೊರೊಕ್ಕೋ, ಟರ್ಕಿ ಹಾಗೂ ಯುಎಇಯಲ್ಲಿ ನಡೆ ಯುವಂಥ ಕಾರ್ಯಕ್ರಮಗಳೊಂದಿಗೆ ಸ್ಥಾನ ಪಡೆದಂತಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಂಸ್ಕೃತಿ ಸಚಿವ ಮಹೇಶ್ ಶರ್ಮಾ, ಪವಿತ್ರ ಕುಂಭ ಮೇಳಕ್ಕೆ ಅವ್ಯಕ್ತ ಪರಂಪರೆಯ ಗರಿ ಮೂಡಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದಿದ್ದಾರೆ. ಅಲಹಾಬಾದ್, ಹರಿದ್ವಾರ, ಉಜ್ಜಯಿನಿ, ನಾಸಿಕ್‌ನಲ್ಲಿ 4 ವರ್ಷಗಳಿಗೊಮ್ಮೆ ಕುಂಭಮೇಳ ನಡೆಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.