ಬಂಡವಾಳ, ನವೋದ್ಯಮಕ್ಕೆ ನಮೋತ್ಸಾಹ
ವಿದೇಶಿ ನೇರ ಹೂಡಿಕೆದಾರರಿಗೆ ರತ್ನಗಂಬಳಿ ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು ಎಫ್ಡಿಐ
Team Udayavani, Jul 6, 2019, 5:00 AM IST
ವಿದೇಶಿ ನೇರ ಬಂಡವಾಳ ಹೂಡಿಕೆಗೆ (ಎಫ್ಡಿಐ) ರತ್ನಗಂಬಳಿ ಸ್ವಾಗತ ಕೋರಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ನವೋದ್ಯಮಕ್ಕೆ ‘ನಮೋತ್ಸಾಹ’ ನೀಡಿದ್ದಾರೆ.
ನವೋದ್ಯಮದ ಬೇರುಗಳು ಗಟ್ಟಿಗೊಳ್ಳಲು ಮತ್ತು ಅವುಗಳ ನಿರಂತರ ಬೆಳವಣಿಗೆಗೆ ಉತ್ತೇಜನ ನೀಡಲಾಗುವುದು. ನವೋದ್ಯಮಿಗಳ ಬಂಡವಾಳ, ತೆರಿಗೆ ಮತ್ತಿತರರ ಹಣಕಾಸಿನ ವಿಷಯಗಳ ಪರಿಶೀಲನೆಗೆ ‘ಈ-ವೆರಿಫಿಕೇಷನ್’ ಪದ್ಧತಿ ತರಲಾಗುವುದು. ಇದರಿಂದ ನವೋದ್ಯಮಿ ಗಳು ಸಂಗ್ರಹಿಸುವ ಹಣಕ್ಕೆ ಆದಾಯ ತೆರಿಗೆ ಇಲಾಖೆ ಪರಿಶೀಲನೆಯ ಅವಶ್ಯಕತೆ ಇರುವುದಿಲ್ಲ. ನವೋದ್ಯಮಿಗಳ ಮೌಲ್ಯಮಾಪನಗಳು ಮತ್ತು ಅವರ ಕುಂದುಕೊರತೆಗಳ ನಿವಾರಣೆಗೆ ಕೇಂದ್ರ ನೇರ ತೆರಿಗೆಗಳ ಮಂಡಳಿಯಿಂದ (ಸಿಬಿಡಿಟಿ) ವಿಶೇಷ ಆಡಳಿತಾತ್ಮಕ ವ್ಯವಸ್ಥೆ ರೂಪಿಸಲಾಗು ವುದು. ನಷ್ಟ ಅನುಭವಿಸುವ ನವೋದ್ಯಮಗಳನ್ನು ಪುನಶ್ಚೇತನಗೊಳಿಸಲು ಅನುಕೂಲವಾಗುವಂತೆ ನಿಯಮಗಳಲ್ಲಿ ಕೆಲವೊಂದು ವಿನಾಯ್ತಿ ನೀಡಲಾ ಗುವುದು ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.
ವಿಮೆ ಕ್ಷೇತ್ರದಲ್ಲಿ ಶೇ.100 ಎಫ್ಡಿಐ: ಜಾಗತಿಕ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಕೆಲವೊಂದು ಏರಿಳಿತಗಳು ಕಂಡ ಬಂದಿದ್ದರೂ, ಭಾರತದಲ್ಲಿ ವಿದೇಶಿ ಬಂಡವಾಳ ಹೂಡಿಕೆಯ ಹರಿವು ಉತ್ತೇಜನಕಾರಿಯಾಗಿದೆ. 2018-19ರಲ್ಲಿ ಇದು ಶೇ.6ರಷ್ಟು ಹೆಚ್ಚಳ ಕಂಡಿದೆ ಎಂದು ಪ್ರತಿಪಾದಿಸಿರುವ ನಿರ್ಮಲಾ ಸೀತಾರಾಮನ್, ಭಾರತವನ್ನು ಇನ್ನಷ್ಟು ಎಫ್ಡಿಐ ಆಕರ್ಷಣೆಯ ತಾಣವನ್ನಾಗಿ ಮಾಡುವ ಗುರಿ ಹೊಂದಿದ್ದಾರೆ. ಇದಕ್ಕಾಗಿ ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಮಾಡಿಕೊಡಲಾಗಿದೆ. ಜತೆಗೆ ವಿಮಾನಯಾನ, ಮೀಡಿಯಾ (ಆ್ಯನಿಮೇಷನ್, ವಿಷ್ಯುವಲ್ ಎಫೆಕ್ಟ್, ಕಾಮಿಕ್) ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ ನೀಡುವ ಸಲಹೆಗಳನ್ನು ಪರಿಶೀಲಿಸಲಾಗುವುದು. ‘ಸಿಂಗಲ್ ಬ್ರಾಂಡ್ ರೀಟೆಲ್ ಸೆಕ್ಟರ್’ನಲ್ಲಿ ಎಫ್ಡಿಐಗೆ ನಿಯಮ ಗಳನ್ನು ಸರಳೀಕರಿಸುವ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.