ಕೃಷಿಗೆ ಬಜೆಟ್ ಬಲ ನಿರೀಕ್ಷೆ
Team Udayavani, Jan 23, 2021, 6:30 AM IST
ಹೊಸದಿಲ್ಲಿ: ಫೆ.1ರಂದು ಮಂಡಿಸಲಾಗುವ ಬಜೆಟ್‌ನಲ್ಲಿ ಕೇಂದ್ರ ಸರಕಾರವು ಕೃಷಿ ವಲಯದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಮೊತ್ತ ಮೀಸಲಿಡಬಹುದು ಎಂಬ ನಿರೀಕ್ಷೆ ಮೂಡಿದೆ.
ಈಗಾಗಲೇ ಕೇಂದ್ರ ಸರಕಾರವು ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ಹಾಕಿಕೊಂಡಿರುವುದಾಗಿ ಹೇಳಿಕೊಂಡೇ ಬಂದಿದೆ. ಅದರಂತೆ ಈ ಉದ್ದೇಶ ಸಾಧಿಸ ಬೇಕೆಂದರೆ ಕೃಷಿ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿ, ರೈತ ಸಮೂಹವನ್ನು ಬಲಿಷ್ಠ ಗೊಳಿಸುವಿಕೆ, ಆಹಾರ ಸಂಸ್ಕೃ ರಣೆ ಮತ್ತಿತರ ವಿಚಾರಗಳ ಮೇಲೆ ಗಮನ ಕೇಂದ್ರೀಕರಿಸಬೇಕಾಗುತ್ತದೆ.
ಈ ಹಿಂದೆಯೇ ಘೋಷಿಸಲಾದ 10 ಸಾವಿರ ಹೊಸ ರೈತ ಉತ್ಪಾದಕರ ಸಂಸ್ಥೆಗಳು(ಎಫ್ಪಿಒ) ನಾಯಕತ್ವ, ಸಾಮರ್ಥ್ಯ ಮತ್ತು ಪರಿಣಾಮಕಾರಿ ಮೂಲಸೌಕರ್ಯದ ಕೊರತೆಯಿಂದ ಬಳಲು ತ್ತಿವೆ. ಹೀಗಾಗಿ ಪ್ರಸ್ತುತ ರಚನೆಯಾಗಿರುವ ಈ ಸಂಸ್ಥೆಗಳನ್ನು ಬಲಿಷ್ಟಗೊಳಿಸಲು ಸೂಕ್ತ ಹಣಕಾ ಸಿನ ನೆರವು ನೀಡುವತ್ತ, ಮಾರುಕಟ್ಟೆಯೊಂದಿಗೆ ಸಣ್ಣ ರೈತರು ಸಂಪರ್ಕ ಸಾಧಿಸಲು ಅಗತ್ಯವಾದ ಇನ್ನಷ್ಟು ಎಫ್ಪಿಒಗಳನ್ನು ರಚಿಸುವತ್ತ ಸರಕಾರ ಹೆಜ್ಜೆ ಹಾಕಬೇಕು ಎಂದು ತಜ್ಞರು ಅಭಿ ಪ್ರಾಯಪಟ್ಟಿದ್ದಾರೆ.
2021ರ ವಿತ್ತ ವರ್ಷದಲ್ಲಿ ಕೃಷಿ ಕ್ಷೇತ್ರಕ್ಕೆ 2 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು.
ಆರೋಗ್ಯ, ಶಿಕ್ಷಣ ಸೆಸ್ ಶೇ.2ರಷ್ಟು ಏರಿಕೆ? :
ಬಜೆಟ್‌ನಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶೇ.2ರ ವರೆಗೆ ಸೆಸ್ ಹೆಚ್ಚಿ ಸಲು ವಿಧಿಸಲು ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ. ವಿತ್ತ ಸಚಿವಾಯ ಮತ್ತು ಕಂದಾಯ ವಿಭಾಗ ಈ ಬಗ್ಗೆ ಪರಾಮರ್ಶೆ ನಡೆಸುತ್ತಿದೆ. ಸದ್ಯ ಆರೋಗ್ಯ ಕ್ಷೇತ್ರದ ಮೇಲೆ ಶೇ.4 ಸೆಸ್ ವಿಧಿಸಲಾಗುತ್ತಿದೆ. ಎರಡೂ ಕ್ಷೇತ್ರಗಳಿಂದ 30 ಸಾವಿರ ಕೋಟಿ ರೂ. ಬೊಕ್ಕಸಕ್ಕೆ ಬರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.