ಆ.9ರ ಭಾರತ್ ಬಂದ್‌ಗೆ ಮುನ್ನ SC/ST ಮಸೂದೆಗೆ ಕೇಂದ್ರ ಸಂಪುಟ ಅಸ್ತು
Team Udayavani, Aug 1, 2018, 7:23 PM IST
ಹೊಸದಿಲ್ಲಿ : ಎಸ್‌ಸಿ/ಎಸ್‌ಟಿ ಕಾಯಿದೆಯ ಅನೇಕ ಅಂಶಗಳನ್ನು ಸುಪ್ರೀಂ ಕೋರ್ಟ್ ಸಡಿಲುಗೊಳಿಸಿದೆ ಎಂದು ಆರೋಪಿಸಿ ಹಲವಾರು ದಲಿತ ಸಂಘಟನೆಗಳು ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಕೆಲ ದಿನಗಳ ತರುವಾಯ ಕೇಂದ್ರ ಸಚಿವ ಸಂಪುಟ ಇಂದು ಬುಧವಾರ, ಎಸ್‌ಸಿ/ಎಸ್‌ಟಿ ಕಾಯಿದೆಯನ್ನು ಅದರ ಮೂಲ ರೂಪದಲ್ಲಿ ಪುನರ್ ಸ್ಥಾಪಿಸುವ ಉದ್ದೇಶದೊಂದಿಗೆ ಮಸೂದೆಯನ್ನು ಸಂಸತ್ತಿನಲ್ಲಿ ಪುನಃ ಮಂಡಿಸಲು ಒಪ್ಪಿಕೊಂಡಿತು. ಎಸ್‌ಸಿ/ಎಸ್‌ಟಿ ಸಂಘಟನೆಗಳು ಇದೇ ಆಗಸ್ಟ್ 9ರಂದು ಭಾರತ್ ಬಂದ್ ಗೆ ಕರೆ ನೀಡಿದ್ದವು.
ಸಂಸತ್ತಿನ ಹಾಲಿ ಮುಂಗಾರು ಅಧಿವೇಶನದಲ್ಲೇ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಮಸೂದೆಯನ್ನು ಮಂಡಿಸಲಾಗುವುದೆಂದು ಮೂಲಗಳನ್ನು ಉಲ್ಲೇಖೀಸಿ ಎಎನ್‌ಐ ವರದಿ ಮಾಡಿದೆ.
ಸರ್ವೋಚ್ಚ ನ್ಯಾಯಾಲಯ ಎಸ್‌ಸಿ/ಎಸ್‌ಟಿ ಕಾಯಿದೆಯ ಕಾಠಿನ್ಯವನ್ನು ಮೆದುಗೊಳಿಸಿರುವುದರ ವಿರುದ್ಧ ದೇಶ ವ್ಯಾಪಿ ಬಂದ್‌ಗೆ ಅನೇಕ ದಲಿತ ಸಂಘಟನೆಗಳು ಕರೆ ನೀಡಿರುವ ದಿನಗಳ ತರುವಾಯ ಕೇಂದ್ರ ಸಚಿವ ಸಂಪುಟ ಇಂದು ಬುಧವಾರ ಮಸೂದೆಯನ್ನು ಪುನರ್ ಮಂಡಿಸುವ ನಿರ್ಧಾರವನ್ನು ತೆಗೆದುಕೊಂಡಿತು.
ಸುಪ್ರೀಂ ಕೋರ್ಟ್ ಈ ವರ್ಷ ಮಾಚ್‌ನಲ್ಲಿ ನೀಡಿದ ತನ್ನ ತೀರ್ಪಿನಲ್ಲಿ ಎಸ್‌ಸಿ/ಎಸ್‌ಟಿ ಕಾಯಿದೆಯಲ್ಲಿ ಪರಿಚಯಿಸಿರುವ ಸುರಕ್ಷಾ ಅಂಶಗಳನ್ನು ಕಟುವಾಗಿ ಟೀಕಿಸಿರುವ ದಲಿತ ಸಂಘಟನೆಗಳು, ಸರ್ವೋಚ್ಚ ನ್ಯಾಯಾಲಯದ ಈ ತೀರ್ಪಿನಿಂದಾಗಿ ಎಸ್‌ಸಿ/ಎಸ್‌ಟಿ ಕಾಯಿದೆ ಬಲಹೀನವಾಗಿದೆ ಎಂದು ಆರೋಪಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.