ಸಚಿವರ ರೇಸಲ್ಲಿ ಕರಂದ್ಲಾಜೆ ಜೋಶಿ, ಅಂಗಡಿ; ನಾಳೆ ಸಂಪುಟ ಪುನಾರಚನೆ
Team Udayavani, Sep 2, 2017, 6:10 AM IST
ನವದೆಹಲಿ: ಕೇಂದ್ರ ಸಚಿವ ಸಂಪುಟದಿಂದ ರಾಜೀನಾಮೆ ನೀಡುವವರ ಸರದಿ ಮುಂದುವರಿದಿದ್ದು, ಭಾನುವಾರ ಬೆಳಗ್ಗೆಯೇ ಸಂಪುಟ ಪುನಾರಚನೆಗೆ ಮುಹೂರ್ತ ನಿಗದಿಯಾಗಿದೆ.
ಭಾನುವಾರ ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾಜ್ಯದ ಸಂಸದರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಷಿ ಮತ್ತು ಸುರೇಶ್ ಅಂಗಡಿ ಅವರಿಗೆ ಸ್ಥಾನ ಸಿಗುವ ಸಂಭವವಿದೆ.
ಸಾಂಖೀÂಕ ಸಚಿವ ಸದಾನಂದಗೌಡ ಅವರನ್ನು ಕೈಬಿಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆಯಾದರೂ, ಮುಂದಿನ ವರ್ಷವೇ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ ಅವರ ಸ್ಥಾನ ಅಭಾದಿತ ಎನ್ನಲಾಗಿದೆ.
ಗುರುವಾರ ರಾತ್ರಿ ಉಮಾಭಾರತಿ, ಕಲ್‌ರಾಜ್ ಮಿಶ್ರಾ, ರಾಜೀವ್ ಪ್ರತಾಪ್ ರೂಢಿ, ಸಂಜೀವ್ ಬಲ್ಯಾನ್, ಫಗ್ಗಾನ್ ಸಿಂಗ್ ಕುಲಸ್ತೆ ರಾಜೀನಾಮೆ ನೀಡಿದ್ದು, ಶುಕ್ರವಾರ ಸಂಜೆ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರೂ ಪದತ್ಯಾಗ ಮಾಡಿದ್ದಾರೆ. ಅಲ್ಲದೆ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರಿಗೂ ರಾಜೀನಾಮೆ ನೀಡುವಂತೆ ಹೇಳಿದ್ದಾರೆ ಎನ್ನಲಾಗಿದ್ದು, ಇನ್ನಷ್ಟು ಸಚಿವರು ಪುನಾರಚನೆಗೂ ಮುನ್ನವೇ ಸಚಿವ ಸ್ಥಾನ ತ್ಯಜಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಚುನಾವಣೆ ಮೇಲೆ ಕಣ್ಣು: ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಮೇಲೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕಣ್ಣಿಟ್ಟಿದ್ದಾರೆ. ಹೀಗಾಗಿ ಕರ್ನಾಟಕಕ್ಕೆ ಕಡೇ ಪಕ್ಷ ಎರಡು ಅಥವಾ ಮೂರು ಸ್ಥಾನ ಸಿಗಬಹುದು ಎಂದು ಅಂದಾಜಿಸಲಾಗುತ್ತಿದೆ. ಅಂತೆಯೇ ಯುವ ಮುಖಗಳ ಮೇಲೂ ದೃಷಿ ನೆಟ್ಟಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಭೂಪೇಂದರ್ ಯಾದವ್, ವಿನಯ್ ಸಹಸ್ರ ಬುದ್ದೆ, ಪ್ರಹ್ಲಾದ್ ಪಟೇಲ್, ಸುರೇಶ್ ಅಂಗಡಿ, ಸತ್ಯಪಾಲ್ ಸಿಂಗ್, ಹಿಮಂತ್ ಬಿಸ್ವಾ ಶರ್ಮಾ, ಅನುರಾಗ್ ಠಾಕೂರ್, ಶೋಭಾ ಕರಂದ್ಲಾಜೆ, ಮಹೀಶ್ ಗಿರಿ ಮತ್ತು ಪ್ರಹ್ಲಾದ್ ಜೋಶಿ ಅವರ ಬಗ್ಗೆ ಚರ್ಚೆ ನಡೆದಿದೆ.
ಅಂತೆಯೇ ತಮ್ಮ ಇಲಾಖೆಗಳಲ್ಲಿ ಉತ್ತಮ ಸಾಧನೆ ಮಾಡಿದ ಪಿಯೂಶ್ ಗೋಯಲ್, ಧರ್ಮೇಂದ್ರ ಪ್ರಧಾನ್, ಮನೋಜ್ ಸಿನ್ಹಾ ಅವರಿಗೆ ಬಡ್ತಿ ಸಿಗಲಿದೆ ಎನ್ನಲಾಗಿದೆ.
ಯಾರಿಗೆ ಏಕೆ ಸಚಿವ ಸ್ಥಾನ?
ಶೋಭಾ ಕರಂದ್ಲಾಜೆ: ಒಕ್ಕಲಿಗ ಸಮುದಾಯಕ್ಕೆ ಸೇರಿದವರು, ಅಂತೆಯೇ ಆರ್‌ಎಸ್‌ಎಸ್‌ನ ಗರಡಿಯಲ್ಲಿ ಪಳಗಿದವರು. ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡದಲ್ಲಿರುವ ಒಕ್ಕಲಿಗ ಮತದಾರರನ್ನು ಸೆಳೆಯುವ ಲೆಕ್ಕಾಚಾರ.
ಪ್ರಹ್ಲಾದ್ ಜೋಷಿ: ಈ ಹಿಂದೆ ಪಕ್ಷದ ರಾಜ್ಯಘಟಕದ ಅಧ್ಯಕ್ಷರಾಗಿದ್ದವರು. ಬಿಜೆಪಿಯ ಪ್ರಮುಖ ವೋಟ್ ಬ್ಯಾಂಕ್ ಇರುವ ಉತ್ತರ ಕರ್ನಾಟಕಕ್ಕೆ ಸೇರಿದವರು. ಈಗಾಗಲೇ ಕಳಸಾ ಬಂಡೂರಿ ವಿಚಾರದಲ್ಲಿ ಬಿಜೆಪಿಗೆ ಕೊಂಚ ಹಿನ್ನಡೆಯಾಗಿದ್ದು, ಈ ಕೊರತೆ ತುಂಬುವ ಯತ್ನ.
ಸುರೇಶ್ ಅಂಗಡಿ: ರಾಜ್ಯದ ಪ್ರಬಲ ಲಿಂಗಾಯಿತ ಸಮುದಾಯಕ್ಕೆ ಸೇರಿದವರು. ಬೆಳಗಾವಿ ಜಿಲ್ಲೆಗೆ ಸೇರಿದವರಾಗಿದ್ದು, ಇಲ್ಲಿ ಬಿಜೆಪಿಗೆ ಬಲ ತುಂಬುವ ಯತ್ನ. ಅಂತೆಯೇ, ಲಿಂಗಾಯಿತ-ವೀರಶೈವ ಧರ್ಮದ ಹೋರಾಟದಲ್ಲಿ ಆಗಿರುವ ಹಿನ್ನಡೆಯನ್ನು ಸರಿದೂಗಿಸಿಕೊಳ್ಳಲುವ ಪ್ರಯತ್ನ.
ಗಡ್ಕರಿಗೆ ರೈಲ್ವೆ?
ಈಗಾಗಲೇ ಸಾರಿಗೆ ಇಲಾಖೆಯಲ್ಲಿ ಉತ್ತಮ ಸಾಧನೆ ಮಾಡಿರುವ ನಿತಿನ್ ಗಡ್ಕರಿ ಅವರನ್ನು ರೈಲ್ವೆಗೆ ವರ್ಗಾಯಿಸುವ ಸಾಧ್ಯತೆ ಇದೆ. ಸುರೇಶ್ ಪ್ರಭು ಪರಿಸರ ಅಥವಾ ಬೇರೊಂದು ಹೊಣೆ ಹೊರಲಿದ್ದಾರೆ. ರವಿಶಂಕರ್ ಪ್ರಸಾದ್ ಅವರ ಹುದ್ದೆಯೂ ಬದಲಾಗಲಿದೆ. ಅರುಣ್ ಜೇಟಿÉ ಕೇವಲ ವಿತ್ತಕ್ಕಷ್ಟೇ ಸೀಮಿತವಾಗಲಿದ್ದಾರೆ. ರಕ್ಷಣೆಯ ಹೊಣೆ ಯಾರಿಗೆ ಎಂಬುದು ಇನ್ನೂ ಖಚಿತವಾಗಿಲ್ಲ.
ಜೆಡಿಯುನಿಂದ ಇಬ್ಬರು?: ನಿತೀಶ್ ಕುಮಾರ್ ಅವರ ಪಕ್ಷದ ರಾಮ್ ಚಂದ್ರ ಪ್ರಸಾದ್ ಸಿಂಗ್ ಮತ್ತು ಸಂತೋಷ್ ಕುಷಾÌ ಅವರಿಗೆ ಸಚಿವ ಸ್ಥಾನ ಸಾಧ್ಯತೆ. ಎಐಎಡಿಎಂಕೆ ಎನ್‌ಡಿಎ ಸೇರುವ ಬಗ್ಗೆ ಇನ್ನೂ ಖಚಿತವಾಗಿಲ್ಲ. ಶಿವಸೇನೆ ಮತ್ತು ಟಿಡಿಪಿಗೆ ಒಂದೊಂದು ಸ್ಥಾನ ಸಿಗುವ ಸಂಭವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.