ಆ.1ರಿಂದ ದೇಶದ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶ ಪ್ರಕ್ರಿಯೆ?
Team Udayavani, Apr 29, 2020, 7:58 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದೇಶದ ವಿಶ್ವವಿದ್ಯಾನಿಲಯಗಳ 2020-21ರ ಶೈಕ್ಷಣಿಕೆ ಪ್ರವೇಶ ಪ್ರಕ್ರಿಯೆಯನ್ನು ಆಗಸ್ಟ್ 1ರಿಂದ 31ರವರೆಗೆ ನಡೆಸುವಂತೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) ಸಮಿತಿ ಶಿಫಾರಸು ಮಾಡಿದೆ.
‘ಹಳೆ /ಹೊಸ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯನ್ನು ಆ.1 ಮತ್ತು ಸೆ.1ರಂದು ಕ್ರಮವಾಗಿ ನಡೆಸಬಹುದು. ಪರೀಕ್ಷೆಗಳನ್ನು 2021ರ ಜ.1.ರಿಂದ 25ರ ಅವಧಿಯಲ್ಲಿ ನಡೆಸಬೇಕು. ಸೆಮಿಸ್ಟರ್ ಜ.27ರಿಂದ ಆರಂಭವಾಗಿ ಮೇ 27 ಮುಗಿಯುವಂತಿರಬೇಕು ಸೇರಿದಂತೆ ಹಲವು ವಿಷಯಗಳ ಕುರಿತಂತೆ ಸಮಿತಿ ಶಿಫಾರಸು ಮಾಡಿದೆ.
ಕೋವಿಡ್ 19 ವೈರಸ್‌ನಿಂದಾಗಿ ವಿವಿಧ ವಿಶ್ವವಿದ್ಯಾನಿಲಯಗಳ ಶೈಕ್ಷಣಿಕೆ ಪ್ರಗತಿಗೆ ಹೊಡೆತ ಬಿದ್ದಿದೆ.
ಎರಡನೇ ಹಂತದ ಲಾಕ್‌ಡೌನ್ ಮುಂದುವರಿದುದರಿಂದ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯನ್ನಿಟ್ಟು ಕೊಂಡು ಸೂಕ್ತ ರೂಪುರೇಷೆಯನ್ನು ಸಿದ್ಧಪಡಿಸಲಾಗಿದೆ ಎಂದು ಸಮಿತಿ ತಿಳಿಸಿದೆ.
ಮಕ್ಕಳಿಗೆ ಬಿಸಿಯೂಟ: ಶಾಲೆಗಳಲ್ಲಿ ಬೇಸಗೆ ರಜೆಯ ಅವಧಿಯಲ್ಲೂ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸಲಾಗುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.
ರಾಜ್ಯಗಳ ಶಿಕ್ಷಣ ಸಚಿವರೊಂದಿಗೆ ಮಂಗಳವಾರ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಈ ಮಾಹಿತಿ ನೀಡಿದ್ದಾರೆ. ಜತೆಗೆ, 10 ಮತ್ತು 12ನೇ ತರಗತಿಯ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಆರಂಭಿಸುವಂತೆ ರಾಜ್ಯಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
ಬಾಲ್ಯ ವಿವಾಹ ಕಾನೂನು ಪರಿಶೀಲನೆ: ಸುಪ್ರೀಂ ಅಸ್ತು
MUST WATCH
ಹೊಸ ಸೇರ್ಪಡೆ
Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.