ಸ್ಕ್ಯಾನ್ ಮಾಡುತ್ತಿದ್ದಾಗ ಸಂಸದೆ ನವನೀತ್ ಫೋಟೋ ಕ್ಲಿಕ್ : ಪ್ರಕರಣ ದಾಖಲು
Team Udayavani, May 12, 2022, 3:38 PM IST
ಮುಂಬಯಿ: ಅಮರಾವತಿ ಸಂಸದೆ ನವನೀತ್ ರಾಣಾ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ಗೆ ಒಳಗಾಗುತ್ತಿದ್ದಾಗ ಅವರ ಫೋಟೋಗಳನ್ನು ಕ್ಲಿಕ್ಕಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬಯಿ ಪೊಲೀಸರು ಬುಧವಾರ (ಮೇ 11) ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಬಾಂದ್ರಾ ಉಪನಗರದಲ್ಲಿರುವ ಲೀಲಾವತಿ ಆಸ್ಪತ್ರೆಯ ಭದ್ರತಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಮೊಬೈಲ್ ಫೋನ್ಗಳಂತಹ ಎಲೆಕ್ಟ್ರಾನಿಕ್ ಸಾಧನಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುವ ಎಂಆರ್ಐ ವಿಭಾಗಕ್ಕೆ ಅಪರಿಚಿತ ವ್ಯಕ್ತಿಯೊಬ್ಬರು ಪ್ರವೇಶಿಸುವ ಮೂಲಕ ರಾಣಾ ಅವರ ಫೋಟೋಗಳನ್ನು ಕ್ಲಿಕ್ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸ ‘ಮಾತೋಶ್ರೀ’ ಹೊರಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿ ಈ ತಿಂಗಳ ಆರಂಭದಲ್ಲಿ ರಾಜದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರು ಜಾಮೀನು ಪಡೆದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.