‘ಯೋಗಿ ಬಜೆಟ್’ನಲ್ಲಿ ಸಾಲ ಮನ್ನಾಗೆ 36 ಸಾವಿರ ಕೋಟಿ
Team Udayavani, Jul 12, 2017, 3:45 AM IST
ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರಕಾರ ಮಂಗಳವಾರ ಮೊದಲ ಬಜೆಟ್ ಮಂಡನೆ ಮಾಡಿದ್ದು, ರೈತರ ಸಾಲ ಮನ್ನಾಗಾಗಿ 2017-18ನೇ ಸಾಲಿನಲ್ಲಿ 36 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ವಿಶೇಷವೆಂದರೆ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಕ್ಷೇತ್ರವಾದ ಅಮೇಠಿಯ ಸುಮಾರು 70 ಸಾವಿರ ರೈತರು ಸಾಲ ಮನ್ನಾ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಈ ಜಿಲ್ಲೆಗೆ ರಾಜ್ಯ ಸರಕಾರ 254.17 ಕೋಟಿಯನ್ನು ನೀಡಲಿದೆ. ಬಜೆಟ್ ಮಂಡಿಸಿದ ಹಣಕಾಸು ಸಚಿವ ರಾಜೇಶ್ ಅಗರ್‌ವಾಲ್, ಚುನಾವಣಾ ಸಮಯದಲ್ಲಿ ಜನತೆಗೆ ಕೊಟ್ಟಿದ್ದ ಭರವಸೆಯಂತೆ ರೈತರ ಸಾಲವನ್ನು ಮನ್ನಾ ಮಾಡುವ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಜತೆಗೆ ಹೊಸ ಜವಳಿ ನೀತಿಯನ್ನೂ ಪ್ರಕಟಿಸಿದ್ದಾರೆ.
ಇದೇ ವೇಳೆ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆಂದು 790 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ. 150 ಕೋಟಿ ರೂ.ಗಳನ್ನು ಈ ಸಮುದಾಯದ ವಿದ್ಯಾರ್ಥಿಗಳ ಶುಲ್ಕವನ್ನು ಮರುಪಾವತಿ ಮಾಡಲೆಂದು ಮೀಸಲಿಟ್ಟಿದ್ದೇವೆ ಎಂದಿದ್ದಾರೆ ಅಗರ್‌ವಾಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ
Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!
Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕಿ ಹ*ತ್ಯೆ!
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.