ಯುಪಿ ಸ್ಥಳೀಯ ಸಂಸ್ಥೆ ಚುನಾವಣೆ: BJP ಭರ್ಜರಿ ಸಾಧನೆ !
Team Udayavani, Dec 1, 2017, 11:44 AM IST
ಲಕ್ನೋ: ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆ ಗಳಿಗೆ ನಡೆದ ಚುನಾವಣೆಯ ಮತ ಏಣಿಕೆ ಶುಕ್ರವಾರ ನಡೆಯುತ್ತಿದ್ದು ಆಡಳಿತಾರೂಢ ಬಿಜೆಪಿ ಭರ್ಜರಿ ಜಯಗಳಿಸಿ ಕೇಕೆ ಹಾಕಿದೆ.
16 ಮಹಾನಗರ ಪಾಲಿಕೆಗಳ ಪೈಕಿ 14 ರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು ಅಧಿಕಾರ ಹಿಡಿಯುವ ಎಲ್ಲಾ ಸಾಧ್ಯತೆಗಳಿವೆ. ವಿಪಕ್ಷ ಬಿಎಸ್ಪಿ 2 ಪಾಲಿಕೆಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಸ್ಪಿ ಮತ್ತು ಕಾಂಗ್ರೆಸ್ ಒಂದೂ ಮಹಾನಗರ ಪಾಲಿಕೆ ಗೆಲ್ಲಲಾಗದೆ ತೀವ್ರ ಮುಖಭಂಗ ಅನುಭವಿಸಿವೆ.
ಪ್ರಧಾನಿ ಮೋದಿ ಅವರು ಪ್ರತಿನಿಧಿಸುತ್ತಿರುವ ವಾರಣಾಸಿ ಸೇರಿದಂತೆ 14 ಪಾಲಿಕೆಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.
ರಾಹುಲ್ಗೆ ಮುಖಭಂಗ
ರಾಹುಲ್ ಗಾಂಧಿ ಪ್ರತಿನಿಧಿಸುವ ಅಮೇಠಿಯಲ್ಲೂ ಕಾಂಗ್ರೆಸ್ ಮುಖಭಂಗ ಅನುಭವಿಸಿದ್ದು ಬಿಜೆಪಿ ಜಯಭೇರಿ ಬಾರಿಸಿದೆ.
ಗೆಲುವಿನಲ್ಲೂ ಸಿಎಂಗೆ ಯೋಗಿಗೆ ಶಾಕ್ !
ಭರ್ಜರಿ ಗೆಲುವಿನ ಹೊರತಾಗಿಯೂ ಸಿಎಂ ಯೋಗಿ ಆದಿತ್ಯನಾಥ್ ಅವರ ಗೋರಖ್ನಾಥ್ ದೇವಾಲಯವಿರುವ ವಾರ್ಡ್ನಲ್ಲೇ ಪಕ್ಷೇತರ ಅಭ್ಯರ್ಥಿ ಎದುರು ಬಿಜೆಪಿ ಅಭ್ಯರ್ಥಿಗೆ ಸೋಲಾಗಿದೆ.
198 ನಗರ ಸಭೆಗಳ ಪೈಕಿ ಬಿಜೆಪಿ 79 ರಲ್ಲಿ ಮುನ್ನಡೆ ಸಾಧಿಸಿದ್ದು, ಬಿಎಸ್ಪಿ 41, ಎಸ್ಪಿ 47 , ಕಾಂಗ್ರೆಸ್ 11 ಮತ್ತು ಇತರರು 20 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಈ ಚುನಾವಣೆ ಅಗ್ನಿ ಪರೀಕ್ಷೆಯಾಗಿತ್ತು. ಇದು ಮೋದಿ ಅವರ ಕೆಲಸಕ್ಕೆ ಸಂದ ಜಯ ಎಂದು ಗೆಲುವಿನ ಸಂಭ್ರಮದಲ್ಲಿಪ್ರತಿಕ್ರಿಯೆ ನೀಡಿದ್ದಾರೆ.
ರಾತ್ರಿಯ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.