ಬಿಜೆಪಿಗೆ 300 ಸ್ಥಾನ ಖಚಿತ: ಉ.ಪ್ರ.ಸಿಎಂ ಯೋಗಿ ಆದಿತ್ಯನಾಥ್
"ಸಿಎನ್‌ಎನ್-ನ್ಯೂಸ್18' ಸಂದರ್ಶನದಲ್ಲಿ ಪ್ರತಿಪಾದನೆ
Team Udayavani, Mar 1, 2022, 7:55 AM IST
ಇಂಫಾಲ್/ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 300ಕ್ಕಿಂತಲೂ ಅಧಿಕ ಸ್ಥಾನಗಳು ಲಭಿಸಲಿವೆ. ನಾನು ಭಗವಾಧಾರಿ. ಅದರ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
“ಸಿಎನ್‌ಎನ್-ನ್ಯೂಸ್18′ ಆಂಗ್ಲ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ದಿನವೂ ರಾಜ್ಯ ಸರ್ಕಾರಕ್ಕೆ ಪರೀಕ್ಷೆಯೇ ಆಗಿದೆ. ಹಿಂದಿನ ಅವಧಿಯಲ್ಲಿನ ನಮ್ಮ ಸಾಧನೆಯನ್ನು ಸುಧಾರಿಸಲು ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.
ಸದ್ಯ ಐದು ಹಂತಗಳ ಚುನಾವಣೆಗಳು ಮುಕ್ತಾಯವಾಗಿವೆ. ಅದರಲ್ಲಿ 225 ಕ್ಷೇತ್ರಗಳಲ್ಲಿ ಬಿಜೆಪಿಯೇ ಜಯಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದಿನ ಎರಡು ಹಂತದಲ್ಲೂ ನಮ್ಮ ಪಕ್ಷಕ್ಕೇ ಹೆಚ್ಚಿನ ಸ್ಥಾನಗಳು ಲಭಿಸಿ 300ಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಲಿದ್ದೇವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇಸರಿ ವರ್ಣ ಎನ್ನುವುದು ಶಕ್ತಿಯ ಮೂಲ ಮತ್ತು ಬೆಂಕಿಯ ಸ್ವರೂಪ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ, ಕೇಸರಿ ವರ್ಣದ ವಸ್ತ್ರ ಧರಿಸುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.
ಮಣಿಪುರದಲ್ಲಿ ಹಿಂಸಾಚಾರ
ಮಣಿಪುರ ವಿಧಾನಸಭೆ ಚುನಾವಣೆಯ ಮೊದಲ ಹಂತ ಸೋಮವಾರ ಹಿಂಸಾಚಾರದಲ್ಲೇ ಕೊನೆಗೊಂಡಿದೆ. 38 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಶೇ.67.53ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಚುರಾಚಂದ್‌ಪುರ ಜಿಲ್ಲೆಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಭಾರೀ ಘರ್ಷಣೆ ನಡೆದಿದೆ. ಒಬ್ಬ ವ್ಯಕ್ತಿ ಗಾಯಗೊಂಡಿದ್ದರೆ, ಇವಿಎಂವೊಂದು ಹಾನಿಗೀಡಾಗಿದೆ. ಕಾಕ್ವಾದಲ್ಲಿ ಬಿಜೆಪಿ ಪೋಲಿಂಗ್ ಬೂತ್ ಅನ್ನು ಕಾಂಗ್ರೆಸ್ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಎನ್‌ಪಿಪಿ ಅಭ್ಯರ್ಥಿಯೊಬ್ಬರ ಕಾರಿನ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ.
ತಿಪಾಯಿಮುಖ್ ಕ್ಷೇತ್ರದ ಮತಗಟ್ಟೆಯಲ್ಲಿ ಕರ್ತವ್ಯಕ್ಕೆಂದು ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿ ನಾವೋರೆಮ್ ಇಬೋಚೌಬಾ ಅವರು ತಮ್ಮದೇ ರೈಫಲ್‌ನ “ಆಕಸ್ಮಿಕ ಫೈರಿಂಗ್’ನಿಂದಾಗಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.