Crime News: ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಷ ಸೇವಿಸಿ ಪ್ರಾಣ ಕಳೆದುಕೊಂಡ ದಂಪತಿ
Team Udayavani, Sep 24, 2023, 9:48 AM IST
ಸಾಂದರ್ಭಿಕ ಚಿತ್ರ
ಲಕ್ನೋ: ಪತ್ನಿ ಮೇಲೆ ಸಾಮೂಹಿಕವಾಗಿ ದೈಹಿಕ ದೌರ್ಜನ್ಯ ನಡೆಸಿದ ಪರಿಣಾಮ ದಂಪತಿ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ಶನಿವಾರ(ಸೆ.24 ರಂದು) ಹೇಳಿದ್ದಾರೆ.
ಸೆಪ್ಟೆಂಬರ್ 20 ಮತ್ತು 21 ರ ಮಧ್ಯರಾತ್ರಿಯ ವೇಳೆ ಇಬ್ಬರು ವ್ಯಕ್ತಿಗಳು ಮಹಿಳೆ ಮೇಲೆ ಸಾಮೂಹಿಕವಾಗಿ ದೈಹಿಕವಾಗಿ ದೌರ್ಜನ್ಯವನ್ನುವೆಸಗಿದ್ದಾರೆ ಎಂದು ದಂಪತಿಯ ಸಂಬಂಧಿಕರು ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈ ಆಘಾತದಿಂದ ದಂಪತಿ ವಿಷ ಸೇವಿಸಿದ್ದಾರೆ. 30 ವರ್ಷದ ವ್ಯಕ್ತಿ ಮತ್ತು 27 ವರ್ಷದ ಪತ್ನಿ ವಿಷ ಸೇವಿಸಿದ್ದಾರೆ. ಇದರ ಪರಿಣಾಮ ಪತಿ ಅದೇ ದಿನ ಮೃತಪಟ್ಟಿದ್ದು, ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮತ್ತೊಂದು ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.
ದಂಪತಿಗಳ ಪ್ರಾಣ ಕಳೆದುಕೊಳ್ಳುವ ಮುನ್ನ ಮೊಬೈಲ್ ನಲ್ಲಿ ವಿಡಿಯೋ ಮಾಡಿ ಆರೋಪಿಗಳ ಹೆಸರನ್ನು ಹೇಳಿದ್ದಾರೆ.
ಮೃತ ವ್ಯಕ್ತಿಯ ಸಹೋದರನ ದೂರಿನ ಆಧಾರದ ಮೇಲೆ ಶುಕ್ರವಾರ(ಸೆ.22 ರಂದು) ಇಬ್ಬರ ವಿರುದ್ಧ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ) ಮತ್ತು 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಗಳಾದ ಆದರ್ಶ್ (25) ಮತ್ತು ತ್ರಿಲೋಕಿ (45) ಅವರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ದಂಪತಿಗೆ ಎಂಟು ಮತ್ತು ಆರು ವರ್ಷದ ಇಬ್ಬರು ಗಂಡು ಮಕ್ಕಳು ಮತ್ತು ಒಂದು ವರ್ಷದ ಮಗಳು ಇದ್ದಾಳೆ. ಮಕ್ಕಳು ಶಾಲೆಗೆ ಹೋಗುವ ಮುನ್ನ ನಾವು ವಿಷ ಸೇವಿಸಿದ್ದೇವೆ ನಾವು ಸಾಯುತ್ತೇವೆ ಎಂದು ಮಕ್ಕಳ ಬಳಿ ಪೋಷಕರು ಹೇಳಿರುವುದಾಗಿ ಪೊಲೀಸರು ಹೇಳಿದ್ದಾರೆ.
ಅತ್ಯಾಚಾರ ಘಟನೆಯು ಮೃತ ವ್ಯಕ್ತಿಯ ಜಮೀನು ಮಾರಾಟದ ವಿಚಾರವಾಗಿ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.