99 ಸೀಟುಗಳ ಎಸ್‌ಪಿ ಕೊಡುಗೆಗೆ ಕಾಂಗ್ರೆಸ್ ತಿರಸ್ಕಾರ; ಮೈತ್ರಿ ಕಷ್ಟ
Team Udayavani, Jan 21, 2017, 7:37 PM IST
ಲಕ್ನೋ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತನಗೆ 110 ಸೀಟುಗಳನ್ನು ನೀಡುವಂತೆ ಕೇಳಿಕೊಂಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿಯಾಗಿರುವ ಅಖೀಲೇಶ್ ಯಾದವ್ 99 ಸೀಟುಗಳನ್ನು ಕೊಟ್ಟಿದ್ದು ಅದನ್ನು ಕಾಂಗ್ರೆಸ್ ತಿರಸ್ಕರಿಸಿದೆ. ಇದರಿಂದಾಗಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷದೊಳಗಿನ ಚುನಾವಣಾ ಮೈತ್ರಿ ಸಂಕಷ್ಟಕ್ಕೆ ಗುರಿಯಾಗಿದೆ.
ಸೀಟು ಹಂಚಿಕೆ ಕುರಿತಾಗಿ ಸಮಾಜವಾದಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಕಳೆದ ಕೆಲವು ದಿನಗಳಿಂದ ಹಲವು ಸುತ್ತಿನ ಮಾತುಕತೆ -ಸಂಧಾನ ನಡೆಯುತ್ತಿತ್ತು. ಆದರೆ ಅವ್ಯಾವುವೂ ಫಲಕಾರಿಯಾಗಿಲ್ಲ. ಸೀಟು ಹಂಚಿಕೆ ಬಿಕ್ಕಟ್ಟು ಮುಂದುವರಿದಿರುವುದಕ್ಕೆ ಉಭಯ ಪಕ್ಷಗಳು ಪರಸ್ಪರರನ್ನು ದೂರಿಕೊಂಡಿವೆ.
ಕಾಂಗ್ರೆಸ್ ಪಕ್ಷದ ಸಲಹೆಗಾರರಾಗಿರುವ ಪ್ರಶಾಂತ್ ಕಿಶೋರ್ ಅವರು ಇಂದು ಸಂಜೆ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರೂ ಅದು ಫಲಕಾರಿಯಾಗಿಲ್ಲ.
ಉತ್ತರ ಪ್ರದೇಶದ ನಿರ್ಗಮನ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ 28 ಶಾಸಕರನ್ನು ಹೊಂದಿದೆ; ಹಾಗಿರುವಾಗ ಅದು ತನಗೆ 100ಕ್ಕೂ ಹೆಚ್ಚು ಸೀಟುಗಳು ಬೇಕೆಂದು ಒತ್ತಾಯಿಸುವುದಕ್ಕೆ ಯಾವ ಸಮರ್ಥನೆ ಇದೆ ಎಂದು ಸಮಾಜವಾದಿ ಪಕ್ಷದ ಮೂಲಗಳು ಪ್ರಶ್ನಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ
Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.