15 ರ ಮಗಳ ಮೇಲೆ ಪೊಲೀಸ್‌ನಿಂದ ರೇಪ್; ಶಾಕ್‌ಗೆ ತಂದೆ ಸಾವು
Team Udayavani, Aug 20, 2017, 12:44 PM IST
ಲಕ್ನೋ: ಉತ್ತರಪ್ರದೇಶದ ಬಲ್ಲಿಯಾದಲ್ಲಿ ನಡೆದ ಹೇಯ ಘಟನೆಯೊಂದರಲ್ಲಿ 15 ವರ್ಷದ ಬಾಲಕಿಯ ಮೇಲೆ ಪೊಲೀಸ್ ಕಾನ್ಸ್‌ಟೇಬಲ್‌ವೊಬ್ಬ ಕಾಮಾಂಧನಾಗಿ ಅತ್ಯಾಚಾರ ಎಸಗಿದ್ದಾನೆ. ಘಟನೆಯ ಬಳಿಕ ಬಾಲಕಿಯ ತಂದೆ ಆಘಾತಗೊಂಡು ಸಾವನ್ನಪ್ಪಿದ್ದಾರೆ.
ಶುಕ್ರವಾರ ಘಟನೆ ನಡೆದಿದ್ದು, ಮನೆಯಿಂದ ಹೊರ ಹೋಗಿದ್ದ ಬಾಲಕಿಯನ್ನು ಕಾನ್ಸ್‌ಟೇಬಲ್ ಎಳೆದೊಯ್ದು ಅತ್ಯಾಚಾರಗೈದಿದ್ದಾನೆ. ಘಟನೆಯ ಬಳಿಕ ಬಾಲಕಿ ಬೊಬ್‌ಬಿಟ್ಟಿದ್ದು ಸಾರ್ವಜನಿಕರು ಸ್ಥಳಕ್ಕಾಗಮಿಸಿದ್ದಾರೆ.
ವಿಷಯ ಕೇಳುತ್ತಿದ್ದಂದೆ ತಂದೆ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಹೇಯ ಕೃತ್ಯ ಎಸಗಿರುವ ಗೋಪಾಲನಗರ ಹೊರ ಠಾಣೆಯ ಪೇದೆ ಯನ್ನು ತಕ್ಷಣದಿಂದ ಅಮಾನತು ಮಾಡಿ ಎಸ್‌ಪಿ ಆದೇಶ ಹೊರಡಿಸಿದ್ದಾರೆ. ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.
ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಉತ್ತರಪ್ರದೇಶದಲ್ಲಿ ಕಾನೂನು ಕಾಯಬೇಕಿದ್ದ ಪೊಲೀಸ್ ಸಿಬಂದಿಯೇ ಅತ್ಯಾಚಾರ ಎಸಗಿರುವುದು ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.