ಅಯ್ಯೋ..!: ಬೀದಿ ನಾಯಿಗೆ ಪಾಂಪ್ಲೆಟ್ ಅಂಟಿಸಿ ಚುನಾವಣಾ ಪ್ರಚಾರ


Team Udayavani, Apr 10, 2021, 4:11 PM IST

್ಹಗ್ಹಹ್ಗ

ರಾಯ್ ಬರೇಲಿ (ಉತ್ತರ ಪ್ರದೇಶ) :  ಈಗಿನ ಚುನಾವಣಾ ಅಭ್ಯರ್ಥಿಗಳು ಮತದಾರರ ಗಮನ ಸೆಳೆಯಲು ವಿಭಿನ್ನ ಐಡಿಯಾಗಳನ್ನು ಬಳಸುತ್ತಿದ್ದಾರೆ. ಹಿಂದಿನ ಕಾಲದಂತೆ ಮನೆ ಮನೆಗೆ ಹೋಗಿ ಚುನಾವಣಾ ಪ್ರಚಾರ ಮಾಡುವ ವಿಧಾನ ದಿನಗಳೆದಂತೆ ಕಡಿಮೆಯಾಗುತ್ತಿದೆ. ಆನ್ ಲೈನ್ ಮಾಧ್ಯಮಗಳ ಮೂಲಕವೂ ಅಂದ್ರೆ ಸೋಷಿಯಲ್ ಮೀಡಿಯಾಗಳಲ್ಲಿ ಮತಯಾಚನೆ ಮಾಡುವುದು ಕೂಡ ಜೋರಾಗಿದೆ. ಆದ್ರೆ ಉತ್ತರ ಪ್ರದೇಶ ಸ್ಥಳೀಯ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳು ವಿಶೇಷ ರೀತಿಯಲ್ಲಿ ಚುನಾವಣಾ ಪ್ರಚಾರ ಮಾಡಿ ಗಮನ ಸೆಳೆದಿದ್ದಾರೆ.

ಹೌದು ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಬಲ್ಲಿಯಾ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರಕ್ಕೆ ಬೀದಿ ನಾಯಿಗಳನ್ನು ಬಳಕೆ ಮಾಡಿಕೊಂಡಿದ್ದಾರೆ. ನಾಯಿ ಬೆನ್ನಿಗೆ ಅಭ್ಯರ್ಥಿಯ ಪಾಂಪ್ಲೆಟ್ ಗಳನ್ನು ಅಂಟಿಸಿ ಪ್ರಚಾರ ಮಾಡಿ ಗಮನ ಸೆಳೆಯುತ್ತಿದ್ದಾರೆ. ನಾಯಿಯು ಎಲ್ಲೆಲ್ಲಿ ಓಡಾಡುತ್ತದೆಯೋ ಅಲ್ಲಲ್ಲಿ ಚುನಾವಣಾ ಪ್ರಚಾರ ಆಗಲಿದೆ ಎಂಬುದು ಆ ಅಭ್ಯರ್ಥಿಗಳ ಐಡಿಯಾ. ಸದ್ಯ ನಾಯಿಗೆ ಪಾಂಪ್ಲೆಟ್ ಅಂಟಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಈ ಬಗ್ಗೆ ಮಾತನಾಡಿರುವ ಚುನಾವಣಾ ಅಭ್ಯರ್ಥಿ, ಪ್ರಚಾರದಲ್ಲಿ ನಾಯಿಗಳನ್ನು ಬಳಕೆ ಮಾಡಿಕೊಳ್ಳಬಾರದು ಎಂದು ಯಾವ ರೂಲ್ಸ್ ಇಲ್ಲ. ನಾವೇನು ಬೀದಿ ನಾಯಿಗಳಿಗೆ ತೊಂದರೆ ಅಥವಾ ನೋವನ್ನು ನೀಡುತ್ತಿಲ್ಲ. ನಾವು ಪ್ರತಿ ನಿತ್ಯ ಅವುಗಳಿಗೆ ಆಹಾರವನ್ನು ಹಾಕ್ತೇವೆ. ಈ ಐಡಿಯಾದಿಂದ ಜನರ ಗಮನ ನಮ್ಮ ಕಡೆ ತಿರುಗುತ್ತದೆ ಎಂದಿದ್ದಾರೆ.

ಆದ್ರೆ ಪ್ರಾಣಿ ಪ್ರಿಯರು ಈ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದು, ಇದು ಶಿಕ್ಷಾರ್ಹ ಅಪರಾಧ ಎಂದಿದ್ದಾರೆ. ಪ್ರಾಣಿ ಪರ ಹೋರಾಟಗಾರ್ತಿ ರೀನಾ ಮಿಶ್ರಾ ಈ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದು, ಚುನಾವಣೆ ವೇಳೆ ಒಬ್ಬ ಮನುಷ್ಯ ತನ್ನ ಮುಖಕ್ಕೆ ಪ್ರಚಾರ ಪತ್ರಗಳನ್ನು ಅಂಟಿಸಿಕೊಂಡರೆ ಹೇಗಿರುತ್ತದೆ?. ನಾಯಿಗಳಿಗೆ ಪ್ರತಿಭಟಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರಚಾರ ಕಾರ್ಯಗಳಿಗೆ ನಾಯಿಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕು ಇಲ್ಲ. ಪೊಲೀಸರು ಈ ಕೂಡಲೇ ಸಂಬಂಧ ಪಟ್ಟ ಚುನಾವಣಾ ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಉತ್ತರ ಪ್ರದೇಶದ ಸ್ಥಳೀಯ ಚುನಾವಣೆಗಳು ನಾಲ್ಕು ಹಂತದಲ್ಲಿ ನಡೆಯಲಿದ್ದು ಮೊದಲ ಹಂತದ ಚುನಾವಣೆ ಏಪ್ರಿಲ್ 15 ರಿಂದ ಶುರುವಾಗಲಿದೆ. ಇನ್ನು ಕೊನೆಯ ಹಂತದ ಚುನಾವಣೆ 19, 26, 20ರಂದು ನಡೆಯಲಿದ್ದು, ಫಲಿತಾಂಶ ಮೇ 2 ರಂದು ಹೊರಬೀಳಲಿದೆ.

 

 

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.