ಉ.ಪ್ರದೇಶದಲ್ಲಿ ಪೊಲೀಸ್ ಹವಾ: 2017ರಿಂದ 168 ಕ್ರಿಮಿನಲ್ ಗಳ ಎನ್ ಕೌಂಟರ್
Team Udayavani, Nov 23, 2022, 11:29 AM IST
ಲಕ್ನೋ: ಉತ್ತರ ಪ್ರದೇಶ ಪೊಲೀಸರು ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಎನ್ ಕೌಂಟರ್ ಮೂಲಕ 168 ಕ್ರಿಮಿನಲ್ ಗಳನ್ನು ಹೊಡೆದುರುಳಿಸಲಾಗಿದೆ. ಅವರಲ್ಲಿ ಹೆಚ್ಚಿನವರು ತಮ್ಮ ತಲೆಯ ಮೇಲೆ 75,000 ರೂಪಾಯಿಗಳಿಂದ ಐದು ಲಕ್ಷ ರೂಪಾಯಿಗಳ ನಗದು ಬಹುಮಾನವನ್ನು ಹೊಂದಿದ್ದರು ಎನ್ನಲಾಗಿದೆ.
2017 ರ ಮಾರ್ಚ್ 20ರಿಂದ 2022 ನವೆಂಬರ್ 20 ರವರೆಗೆ ಬಂಧಿಸಲಾದ ಒಟ್ಟು 22,234 ಕ್ರಿಮಿನಲ್ ಗಳಲ್ಲಿ 4,557 ಜನರನ್ನು ಎನ್‌ಕೌಂಟರ್ ಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಸಮಯದಲ್ಲಿ ಗುಂಡಿನ ಚಕಮಕಿಯಲ್ಲಿ 13 ಪೊಲೀಸ್ ಸಿಬ್ಬಂದಿಗಳು ಸಹ ಸಾವನ್ನಪ್ಪಿದ್ದು, 1,375 ಪೊಲೀಸರಿಗೆ ಬುಲೆಟ್ ಗಾಯಗಳಾಗಿವೆ ಎಂದು ಉತ್ತರ ಪ್ರದೇಶ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿದರು.
ಇದನ್ನೂ ಓದಿ:ನಗರದಲ್ಲಿ ಹೊಸ ಬಸ್-ಬೇ ನಿರ್ಮಾಣ; ತಂಗುದಾಣವಿರುವಲ್ಲಿ ದಟ್ಟಣೆ ತಪ್ಪಿಸಲು ಕ್ರಮ
ಉತ್ತರ ಪ್ರದೇಶ ಪೊಲೀಸರು ಎಲ್ಲಾ ಎನ್ ಕೌಂಟರ್ ಗಳ ಸಮಯದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪಾಲಿಸಿದ್ದಾರೆ. 2017ರಿಂದ ಇಲ್ಲಿಯವರೆಗೆ ಒಂದೇ ಒಂದು ನಿಯಮ ಉಲ್ಲಂಘನೆ ಪ್ರಕರಣ ನಡೆದಿಲ್ಲ ಎಂದು ಎಡಿಜಿ ಹೇಳಿದರು.
ಅಪರಾಧ, ಅಪರಾಧಿಗಳು, ಮಾಫಿಯಾದ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ನಾವು ಅನುಸರಿಸುತ್ತಿದ್ದೇವೆ. ಕೇವಲ ಸ್ಪೆಷಲ್ ಟಾಸ್ಕ್ ಫೋರ್ಸ್ ಮಾತ್ರವಲ್ಲದೆ ಪೊಲೀಸ್ ಕಮಿಷನರೇಟ್, ಜಿಲ್ಲಾ ಪೊಲೀಸರು ಕೂಡಾ ಈ ಅಭಿಯಾನದಲ್ಲಿ ಸಕ್ರಿಯರಾಗಿದ್ದಾರೆ ಎಂದು ಎಡಿಜಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.