UP Teacher: ಪಾಠ ಮಾಡುವುದು ಬಿಟ್ಟು ಕ್ಯಾಂಡಿ ಕ್ರಷ್ ಆಡುತ್ತಿದ್ದ ಶಾಲಾ ಶಿಕ್ಷಕ ಅಮಾನತು


Team Udayavani, Jul 11, 2024, 1:49 PM IST

UP Teacher: ಪಾಠ ಮಾಡುವುದು ಬಿಟ್ಟು ಕ್ಯಾಂಡಿಕ್ರಷ್ ಆಡುತ್ತಿದ್ದ ಶಾಲಾ ಶಿಕ್ಷಕ ಅಮಾನತು

ಉತ್ತರ ಪ್ರದೇಶ: ಶಾಲಾ ಸಮಯದಲ್ಲಿ ಮಕ್ಕಳಿಗೆ ಪಾಠ ಮಾಡುವುದು ಬಿಟ್ಟು ಮೊಬೈಲ್ ನಲ್ಲಿ ಕ್ಯಾಂಡಿ ಕ್ರಷ್ ಆಟವಾಡುತ್ತಾ ಕುಳಿತು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದ್ದ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಿದ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಅಮಾನತು ಗೊಂಡಿರುವ ಶಿಕ್ಷಕನನ್ನು ಪ್ರಿಯಂ ಗೋಯಲ್ ಎನ್ನಲಾಗಿದ್ದು, ಈ ಶಿಕ್ಷಕ ತನ್ನ ಕರ್ತವ್ಯದ ಸಮಯದಲ್ಲಿ ಮಕ್ಕಳಿಗೆ ಪಾಠ ಮಾಡುವ ಬದಲು ತರಗತಿಯಲ್ಲಿ ಕುಳಿತುಕೊಂಡು ತನ್ನ ಮೊಬೈಲ್ ನಲ್ಲಿ ಗೇಮ್ಸ್ ಆಡುವುದು, ಬೇರೆಯವರಿಗೆ ಕರೆ ಮಾಡಿ ಮಾತನಾಡುವುದು ಹೀಗೆ ಪಾಠ ವೊಂದನ್ನು ಬಿಟ್ಟು ಮೊಬೈಲ್ ನಲ್ಲೆ ಹೆಚ್ಚು ಕಾಲ ಕಳೆಯುತ್ತಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ ಅಲ್ಲದೆ ಈ ಕುರಿತು ಉನ್ನತ ಅಧಿಕಾರಿಗಳಿಗೆ ದೂರು ಕೂಡ ನೀಡಲಾಗಿದ್ದು ಅದರಂತೆ ಶಾಲೆಗೆ ಧಿಡೀರ್ ಪರಿಶೀಲನೆಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪನ್ಸಿಯಾ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಶಿಕ್ಷಕ ತನ್ನ ಕೈಯಲಿ ಮೊಬೈಲ್ ಹಿಡಿದುಕೊಂಡಿರುವುದು ಗಮನಕ್ಕೆ ಬಂದಿದೆ ಅಲ್ಲದೆ ಮೊಬೈಲ್ ಪರಿಶೀಲನೆ ನಡೆಸಿದ ವೇಳೆ ಕ್ಯಾಂಡಿಕ್ರಷ್ ಆಡುತ್ತಿರುವುದು ಬೆಳಕಿಗೆ ಬಂದಿದೆ.
ಇದಾದ ಬಳಿಕ ತರಗತಿಯ ವಿದ್ಯಾರ್ಥಿಗಳ ಪುಸ್ತಕಗಳನ್ನು ಪರಿಶೀಲನೆ ನಡೆಸಿದ ವೇಳೆ ವಿದ್ಯಾರ್ಥಿಗಳು ತಪ್ಪು ತಪ್ಪು ಬರೆದಿರುವುದು ಬೆಳಕಿಗೆ ಬಂದಿದೆ, ಈ ಕುರಿತು ಮಕ್ಕಳಲ್ಲಿ ವಿಚಾರಿಸಿದಾಗ ವಿದ್ಯಾರ್ಥಿಗಳು ಶಿಕ್ಷಕರು ಪಾಠ ಮಾಡುವ ಸಮಯದಲ್ಲಿ ಮೊಬೈಲ್ ಹಿಡಿದುಕೊಂಡು ಗೇಮ್ಸ್ ಆಡುತ್ತಾ ಇರುತ್ತಾರೆ, ಇದ್ದದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ ಎಂದು ಹೇಳಿಕೊಂಡಿದ್ದಾರೆ, ಅಲ್ಲದೆ ನಮ್ಮ ಹೋಂ ವರ್ಕ್ ಅನ್ನು ಶಿಕ್ಷಕರು ಪರಿಶೀಲನೆ ಮಾಡುವುದಿಲ್ಲ ಎಂದಿದ್ದಾರೆ,


ಘಟನೆ ಸಂಬಂಧ ಶಿಕ್ಷಕನ ಮೊಬೈಲ್ ಫೋನ್ ಪಡೆದು ಪರಿಶೀಲನೆ ನಡೆಸಿದ ವೇಳೆ ಶಾಲಾ ಸಮಯದಲ್ಲಿ ಸುಮಾರು ಐದು ಗಂಟೆಗಳ ಕಾಲ ಮೊಬೈಲ್ ಬಳಕೆಯನ್ನೇ ಮಾಡಿರುವುದು ಬೆಳಕಿಗೆ ಬಂದಿದೆ, ಇನ್ಸ್ಟಾಗ್ರಾಮ್, ಫೇಸ್ ಬುಕ್, ಗೇಮ್ಸ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಮಯ ವ್ಯರ್ಥ ಮಾಡಿರುವುದು ಕಂಡುಬಂದಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಸಮಯದಲ್ಲಿ ವಿಡಿಯೋ ಗೇಮ್ ಆಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿದ್ದಾರೆ ಎಂದು ರಾಜೇಂದ್ರ ಪನ್ಸಿಯಾ ಹೇಳಿದ್ದು ಇದರ ಬೆನ್ನಿಗೆ ಕರ್ತವ್ಯದಿಂದ ಅಮಾನತು ಗೊಳಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ: Hubli; ಆನ್‌ಲೈನ್‌ ಗೇಮ್‌ ನಲ್ಲಿ ಹಣ ಕಳೆದುಕೊಂಡಿದ್ದ ವಿದ್ಯಾರ್ಥಿ ನೇಣಿಗೆ ಶರಣು

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.