UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
Team Udayavani, Oct 24, 2024, 3:45 PM IST
ಉತ್ತರಪ್ರದೇಶ: ಕಳೆದ ಮೂರೂ ದಿನಗಳಲ್ಲಿ ಐದು ಮಂದಿಗೆ ಹಾವು ಕಚ್ಚಿ ಮೂವರು ಮೃತಪಟ್ಟು ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಭಯಾನಕ ಘಟನೆಯೊಂದು ಉತ್ತರ ಪ್ರದೇಶದ ಹಾಪುರ್‌ನಲ್ಲಿ ಬೆಳಕಿಗೆ ಬಂದಿದೆ.
ಇಲ್ಲಿನ ಗರ್ಮುಕ್ತೇಶ್ವರ ತೆಹಸಿಲ್‌ನ ಸದರ್‌ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು ಗ್ರಾಮದ ಜನ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿ ನಿರ್ಮಾಣವಾಗಿದೆ, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.
ಕಳೆದ ಸೋಮವಾರ (ಅ.20) ರಂದು ಹಾವಿನ ದಾಳಿ ಆರಂಭವಾಗಿದ್ದು ಸದರ್‌ಪುರ ಗ್ರಾಮದ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳೊಂದಿಗೆ ಮನೆಯಲ್ಲಿ ಮಲಗಿದ್ದ ವೇಳೆ ಮೂವರಿಗೂ ಹಾವು ಕಚ್ಚಿದೆ ವಿಚಾರ ಗೊತ್ತಾಗುತ್ತಿದ್ದಂತೆ ಕೂಡಲೇ ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಾರಿಯಾಗದೆ ಮೂವರು ಮಂಗಳವಾರ (ಅ.21) ರಂದು ಕೊನೆಯುಸಿರೆಳೆದಿದ್ದಾರೆ.
ಇದಾದ ಬಳಿಕ ಬುಧವಾರ ಮತ್ತೊಂದು ಘಟನೆಯಲ್ಲಿ ಇಬ್ಬರಿಗೆ ಹಾವು ಕಚ್ಚಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ, ಸದ್ಯ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಹಾವು ಸೆರೆಗೆ ಕ್ರಮ:
ಇತ್ತ ಗ್ರಾಮದಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಾಗುತ್ತಿದ್ದಂತೆ ಹಾವಿನ ಸೆರೆಗೆ ಅರಣ್ಯ ಇಲಾಖೆ ತಂಡ ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದರೆ, ಇನ್ನೊಂದೆಡೆ ಹಾವಾಡಿಗನನ್ನು ಕರೆಸಿ ಪುಂಗಿ ಊದುತ್ತಾ ಹಾವು ಹಿಡಿಯುವ ಕಾರ್ಯಾಚರಣೆ ನಡೆಸಲಾಗುತ್ತಿದೆ ಅದರಂತೆ ಬುಧವಾರ(ಅ.23) ರಂದು ಒಂದು ಹಾವನ್ನು ರಕ್ಷಣೆ ಮಾಡುವಲ್ಲಿ ತಂಡ ಯಶಸ್ವಿಯಾಗಿದ್ದು ಇನ್ನೊಂದು ಹಾವು ಇರುವ ಹಿನ್ನೆಲೆಯಲ್ಲಿ ಎರಡನೇ ಹಾವಿನ ರಕ್ಷಣಾ ಕಾರ್ಯಾಚರಣೆಯನ್ನು ತಂಡ ನಡೆಸುತ್ತಿದೆ.
ಒಟ್ಟಿನಲ್ಲಿ ಹಾವು ಹಿಡಿಯುವ ತನಕ ಗ್ರಾಮದ ಜನರಿಗೆ ನಿದ್ದೆ ಇರದ ಸ್ಥಿತಿ ನಿರ್ಮಾಣವಾದಂತಾಗಿದೆ.
ಇದನ್ನೂ ಓದಿ: India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.