ಗೆಳತಿಯೊಂದಿಗೆ ಜೀವಿಸಲು ಲಿಂಗ ಬದಲಾವಣೆಗೆ ನಿರ್ಧರಿಸಿದ ಯುವತಿ!
ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಗಂಡಾಗಲು ಸಲಿಂಗಕಾಮಿಯ ನಿರ್ಧಾರ: ಪ್ರಕ್ರಿಯೆ ಮುಕ್ತಾಯಗೊಳ್ಳಲು ಇನ್ನೂ ಒಂದೂವರೆ ವರ್ಷ ಬೇಕು
Team Udayavani, Jun 28, 2022, 7:00 AM IST
ಲಕ್ನೋ: ತನ್ನ ಗರ್ಲ್ ಫ್ರೆಂಡ್ ಜೊತೆಗಿನ ಸಂಬಂಧಕ್ಕೆ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಪ್ರಯಾಗ್ರಾಜ್ನ ಮಹಿಳೆಯೊಬ್ಬಳು ತನ್ನ ಲಿಂಗ ಬದಲಾವಣೆ ಮಾಡಿಕೊಂಡ ಘಟನೆ ನಡೆದಿದೆ.
ಸಲಿಂಗಕಾಮಿಗಳಾಗಿದ್ದ ಇಬ್ಬರು ಯುವತಿಯರು ಬದುಕಿನುದ್ದಕ್ಕೂ ಜತೆಗಿರಲು ಬಯಸಿದ್ದರು. ಆದರೆ, ಇದಕ್ಕೆ ಅವರ ಕುಟುಂಬಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಅವರ ಸಂಬಂಧವನ್ನು ಒಪ್ಪಿಕೊಳ್ಳಲು ಯಾರೂ ಸಿದ್ಧರಿರಲಿಲ್ಲ. ಹೀಗಾಗಿ, ಒಬ್ಬ ಯುವತಿಯು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಗಂಡಾಗಿ ಬದಲಾಗಲು ನಿರ್ಧರಿಸಿದ್ದಾಳೆ.
ನಮ್ಮ ಬದುಕಿನಲ್ಲಿ ಇನ್ಯಾರೂ ಮಧ್ಯಪ್ರವೇಶ ಮಾಡಬಾರದು, ನಮ್ಮ ಸಂಬಂಧಕ್ಕೆ ಯಾರೂ ಅಡ್ಡಿ ಉಂಟುಮಾಡಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಆಕೆ ಹೇಳಿದ್ದಾರೆ.
ಇದನ್ನೂ ಓದಿ:ನ್ಯೂಯಾರ್ಕ್ನಲ್ಲಿ ಶೂಟೌಟ್: ಭಾರತೀಯ ಮೂಲದ ವ್ಯಕ್ತಿಯ ಹತ್ಯೆ
ಪ್ರಯಾಗ್ರಾಜ್ನ ಸ್ವರೂಪ್ರಾಣಿ ನೆಹರೂ ಆಸ್ಪತ್ರೆಯ ವೈದ್ಯರ ತಂಡವು ಈ ಶಸ್ತ್ರಚಿಕಿತ್ಸೆ ನೆರವೇರಿಸಲಿದೆ. ಇಡೀ ಪ್ರಕ್ರಿಯೆ ಮುಗಿಯಲು ಇನ್ನೂ ಒಂದೂವರೆ ವರ್ಷ ಹಿಡಿಯಲಿದೆ. ಅದಾದ ಬಳಿಕ ಆಕೆ ಗಂಡಾಗಿ ಬದಲಾಗಲಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.