ಉಪಹಾರ್ ಅಗ್ನಿ ದುರಂತ ಕೇಸ್; ಅನ್ಸಾಲ್ ಗೆ 1 ವರ್ಷ ಜೈಲು: ಸುಪ್ರೀಂ
Team Udayavani, Feb 9, 2017, 3:09 PM IST
ನವದೆಹಲಿ:ಉಪಹಾರ್ ಚಿತ್ರಮಂದಿರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 1997 ಜೂನ್ 13ರಂದು ದೋಷಿಯಾಗಿದ್ದ ಗೋಪಾಲ್ ಅನ್ಸಾಲ್ ಒಂದು ವರ್ಷ ಜೈಲುಶಿಕ್ಷೆ ಅನುಭವಿಸಬೇಕೆಂದು ಗುರುವಾರ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಅನ್ಸಾಲ್ ಈಗಾಗಲೇ 4 ತಿಂಗಳು ಜೈಲುಶಿಕ್ಷೆ ಅನುಭವಿಸಿದ್ದ.
59 ಜನರ ಸಾವಿಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ ಗೋಪಾಲ್ ಅನ್ಸಾಲ್ ನಾಲ್ಕು ವಾರಗಳೊಳಗೆ ಶರಣಾಗಿ ಉಳಿದಿರುವ ಜೈಲುಶಿಕ್ಷೆಯನ್ನು ಅನುಭವಿಸಬೇಕೆಂದು ಸುಪ್ರೀಂಕೋರ್ಟ್ ಪೀಠ ಬಹುಮತದ(2:1) ತೀರ್ಪನ್ನು ನೀಡಿದೆ.
ಉಪಹಾರ್ ಚಿತ್ರಮಂದಿರದ ಅಗ್ನಿದುರಂತ ಘಟನೆಯಲ್ಲಿ ಸುಶೀಲ್ ಅನ್ಸಾಲ್ ಕೂಡಾ ದೋಷಿಯಾಗಿದ್ದು, ಈಗಾಗಲೇ 4 ತಿಂಗಳು ಜೈಲುಶಿಕ್ಷೆ ಅನುಭವಿಸಿದ್ದು, ವಯೋಮಾನದ ದೃಷ್ಟಿಯಿಂದ ಬಾಕಿ ಉಳಿದಿರುವ ಜೈಲುಶಿಕ್ಷೆಯಿಂದ ವಿನಾಯ್ತಿ ನೀಡಲಾಗಿದೆ.
2015ರ ಆಗಸ್ಟ್ 19 ರಂದು ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್ ಸುಶೀಲ್ ಮತ್ತು ಗೋಪಾಲ್ಗೆ 30 ಕೋಟಿ ರೂ. ಪರಿಹಾರವನ್ನು ಮೃತರ ಕುಟುಂಬಸ್ಥರಿಗೆ ನೀಡಬೇಕು ಎಂದು ತೀರ್ಪು ನೀಡಿತ್ತು. 3 ತಿಂಗಳೊಳಗೆ ಪರಿಹಾರ ನೀಡಲು ವಿಫಲರಾದರೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದೂ ಸಹ ತಿಳಿಸಿತ್ತು. ಕೋರ್ಟ್ ತೀರ್ಪಿನ ನಂತರ ಅನ್ಸಾಲ್ ಸಹೋದರರು ಪರಿಹಾರದ ಮೊತ್ತವನ್ನು ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪಾವತಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.