ಅಮೆರಿಕಕ್ಕಿಂತ ನಾವೇ ಬೆಸ್ಟ್! ಮೆಚ್ಚುಗೆ ಪಡೆದ ಸಚಿವ ಜೈಶಂಕರ್ ವಿಡಿಯೋ
Team Udayavani, Aug 17, 2022, 10:15 PM IST
ನವದೆಹಲಿ: ಕೊರೊನಾ ಲಸಿಕೆ ಅಭಿಯಾನದ ವಿಚಾರದಲ್ಲಿ ಅಮೆರಿಕಕ್ಕಿಂತ ಭಾರತ ಹೆಚ್ಚು ತಾಂತ್ರಿಕವಾಗಿ ಕೆಲಸ ಮಾಡಿ ಸೈ ಎನಿಸಿಕೊಂಡಿದೆ. ಈ ವಿಚಾರವನ್ನು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅನುಭವದೊಂದಿಗೆ ವಿವರಿಸಿದ್ದು, ಆ ವಿಡಿಯೋ ಅನೇಕರ ಮೆಚ್ಚುಗೆಗೆ ಪಾತ್ರವಾಗಿದೆ.
“ನಾನು 2021ಕ್ಕೆ ಅಮೆರಿಕ ಪ್ರವಾಸಕ್ಕೆ ಹೋಗಿದ್ದೆ. ಅಲ್ಲಿಯೇ ಹುಟ್ಟಿ ಬೆಳೆದಿರುವ ನನ್ನ ಮಗನೊಂದಿಗೆ ರೆಸ್ಟೋರೆಂಟ್ ಒಂದಕ್ಕೆ ಹೋದೆ. ಅಲ್ಲಿ ನಮಗೆ ಲಸಿಕೆ ಪ್ರಮಾಣ ಪತ್ರ ಕೇಳಿದರು. ನಾನು ಮೊಬೈಲ್‌ನಲ್ಲೇ ಪ್ರಮಾಣ ಪತ್ರ ತೋರಿಸಿದೆ. ಆದರೆ ನನ್ನ ಮಗ ಅವನ ವ್ಯಾಲೆಟ್‌ನಲ್ಲಿದ್ದ ಚೀಟಿಯೊಂದನ್ನು ತೆಗೆದು ತೋರಿಸಿದ’ ಎಂದು ಜೈಶಂಕರ್ ತಮ್ಮ ಅನುಭವವನ್ನು ವಿವರಿಸಿದ್ದಾರೆ.
ಲಸಿಕೆಯ ಪ್ರಮಾಣಪತ್ರ ಮೊಬೈಲ್‌ನಲ್ಲೇ ಸಿಗಬೇಕು ಎನ್ನುವ ಕಾರಣಕ್ಕೆ ನಾವು ಕೊವಿನ್ ಆ್ಯಪ್ ತಯಾರಿಸಿದೆವು. ಈ ರೀತಿಯ ಸುಲಭದ ತಾಂತ್ರಿಕ ಸೌಲಭ್ಯ ಅನೇಕ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲೂ ಇಲ್ಲ ಎನ್ನುವುದನ್ನು ನಾವು ಗಮನಿಸಬೇಕು ಎಂದೂ ಸಚಿವರು ಹೇಳಿದ್ದಾರೆ.
This is so fun – and so illustrative of the new world!
Dr S Jaishankar, Min of External Affairs India ?? went to a Restaurant with his son in the US and what happened next is hilarious ?— Erik Solheim (@ErikSolheim) August 16, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.