![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 7, 2022, 7:50 AM IST
ಅಲಹಾಬಾದ್/ವಾರಾಣಸಿ: “ಮಸೀದಿಗಳಲ್ಲಿ ಆಜಾನ್‌ಗಾಗಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕು ಅಲ್ಲ’ ಎಂದು ಅಲಹಾಬಾದ್ ಹೈಕೋರ್ಟ್ ಗುರುವಾರ ಹೇಳಿದೆ. ಜತೆಗೆ ಅದಕ್ಕೆ ಸಂಬಂಧಿಸಿದ ಅರ್ಜಿಯನ್ನೂ ತಿರಸ್ಕರಿಸಿದೆ. ನ್ಯಾ| ವಿವೇಕ್ ಕುಮಾರ್ ಬಿರ್ಲಾ ಮತ್ತು ನ್ಯಾ| ವಿಕಾಸ್ ಬುಧ್ವಾರ್ ಅವರನ್ನೊಳಗೊಂಡ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಉ.ಪ್ರ.ದ ಬದೌನ್ ಜಿಲ್ಲೆಯ ಧೋರನ್‌ಪುರ ಗ್ರಾಮದ ಮಸೀದಿಗೆ ಧ್ವನಿವರ್ಧಕ ಅಳವಡಿಸಲು ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅದು ತಿರಸ್ಕೃತಗೊಂಡಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಮಹಾರಾಷ್ಟ್ರದಲ್ಲಿ ಧ್ವನಿವರ್ಧಕ ವಿವಾದ ಉಂಟಾಗಿರುವಂತೆಯೇ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಭಕ್ತಿ ಗೀತೆ ಹಾಕಿದ್ದಕ್ಕೆ ಕೊಲೆ: ಮನೆಯ ಆವರಣದಲ್ಲಿದ್ದ ದೇವಸ್ಥಾನದ ಧ್ವನಿವರ್ಧಕದಲ್ಲಿ ಭಕ್ತಿಗೀತೆ ಹಾಕಿದ್ದಕ್ಕೆ ಆ ಮನೆಯ ಮಾಲಕನನ್ನೇ ಕೊಲೆ ಮಾಡಿರುವ ಘಟನೆ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಐವರನ್ನು ಪೊಲೀಸರು ಬಂಧಿಸಿ ದ್ದಾರೆ. ಜಸ್ವಂತ್ ಠಾಕೂರ್ ಮನೆಯ ಆವರಣ ದಲ್ಲಿದ್ದ ದೇಗುಲದ ಧ್ವನಿವರ್ಧಕದಲ್ಲಿ ಭಕ್ತಿಗೀತೆ ಹಾಕಿದ್ದರು. ಅದೇ ವಿಚಾರಕ್ಕೆ ಜಗಳವಾಗಿ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಕೊನೆಯುಸಿರೆಳೆದಿದ್ದಾರೆ.
ಜ್ಞಾನವ್ಯಾಪಿಯಲ್ಲಿ ಸಮೀಕ್ಷೆ ಶುರು
ವಾರಾಣಸಿಯ ಜ್ಞಾನವ್ಯಾಪಿ ಮಸೀದಿಯಲ್ಲಿ ಶುಕ್ರವಾರದಿಂದ ಬಿಗಿ ಬಂದೋಬಸ್ತ್ನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಸ್ಥಳೀಯ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಶೃಂಗಾರ ಗೌರಿ ಪೂಜೆಯ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ. ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮುಖಂಡರ ಸಮಕ್ಷಮದಲ್ಲಿ ಈ ಕಾರ್ಯ ನಡೆಸಲಾಗುತ್ತಿದೆ. ಶನಿವಾರವೂ ಇದು ಮುಂದುವರಿಯಲಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.