ಯುಪಿ ಬಿಜೆಪಿ ಶಾಸಕನ ಪುತ್ರನ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ
Team Udayavani, May 8, 2018, 11:34 AM IST
ಲಕ್ನೋ: ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದು,ಯುವತಿಯೊಬ್ಬರು ಶಾಸಕನ ಪುತ್ರನಿಂದ ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಆರೋಪಿಸಿ ಹೋರಾಟಕ್ಕಿಳಿದಿದ್ದಾರೆ.
ಶಹಜಾನ್‌ಪುರದ ಜಿಲ್ಲಾಧಿಕಾರಿ ಕಚೇರಿ ಎದುರು ಯುವತಿ, ಪೋಷಕರು ಮತ್ತು ಇತರ ಕೆಲವರೊಂದಿಗೆ ಪ್ರತಿಭಟನೆ ನಡೆಸಿ ಶಾಸಕ ರೋಶನ್ ಲಾಲ್ ವರ್ಮಾರ ಪುತ್ರ ಮನೋಜ್ ಲಾಲ್ ವರ್ಮಾನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಪೊಲೀಸರು ಕಾಟಾಚಾರಕ್ಕೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ವಿಚಾರಣೆಯನ್ನೂ ಸರಿಯಾಗಿ ಮಾಡಿಲ್ಲ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದಾರೆ.
ಮನೋಜ್ ಲಾಲ್ 2011 ರಿಂದಲೂ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನನ್ನನ್ನು ಅಕ್ರಮ ಬಂಧನದಲ್ಲೂ ಇರಿಸಿದ್ದ ಎಂದು ಯುವತಿ ಆರೋಪಿಸಿದ್ದಾರೆ.
ಈಗಾಗಲೇ ಉನ್ನಾವ್‌ನಲ್ಲಿ 16ರ ಹರೆಯದ ಹುಡುಗಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೇಂಗರ್ ಅವರನ್ನು ಸಿಬಿಐ ಬಂಧಿಸಿದ್ದು, ಆ ಕಳಂಕದ ಬೆನ್ನಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟಕ್ಕೆ ವಿಪಕ್ಷಗಳಿಗೆ ಇನ್ನೊಂದು ಅಸ್ತ್ರ ಸಿಕ್ಕಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.