ರೈತರ ಪ್ರತಿಭಟನೆ ಬೆಂಬಲಿಸಿ ಬಿಜೆಪಿಗೆ ಗುಡ್ ಬೈ ಹೇಳಿದ ನಾಯಕಿ
Team Udayavani, Apr 7, 2021, 4:22 PM IST
ಮುಜಾಫರ್ನಗರ: ಉತ್ತರ ಪ್ರದೇಶ ಬಿಜೆಪಿ ನಾಯಕಿ ಪ್ರಿಯಮ್ವಾಡ ಅವರು ಬುಧವಾರ ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದಾರೆ.
ಕಳೆದ ಕೆಲ ತಿಂಗಳುಗಳಿಂದ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಪ್ರಿಯಮ್ ವಾಡ್ ಬೆಂಬಲ ನೀಡಿದ್ದಾರೆ. ದೇಶದ ಅನ್ನದಾತರ ಪ್ರತಿಭಟನೆಗೆ ಬೆಂಬಲಿಸುವ ಉದ್ದೇಶದಿಂದಲೇ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅವರು ಮಾತೃ ಪಕ್ಷದ ಜತೆಗೆ ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರಿಗೆ ರವಾನಿಸಿರುವ ಪ್ರಿಯಮ್ ವಾಡ್, ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ, ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿದೆ. ಹೊಸ ಕೃಷಿ ಕಾನೂನುಗಳ ವಿರುದ್ಧ ನಾಲ್ಕು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಅವರ ಬಗ್ಗೆ ಕೇಂದ್ರ ಸರ್ಕಾರ ಯೋಚಿಸುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.
ಇನ್ನು ತಮ್ಮ ರಾಜೀನಾಮೆಗೆ ಬಿಜೆಪಿಯ ರೈತ ವಿರೋಧಿ ನಡೆಯೇ ಪ್ರಮುಖ ಕಾರಣ ಎಂದು ಪ್ರಿಯಮ್ವಾಡ ಹೇಳಿಕೊಂಡಿದ್ದಾರೆ. ಅದೇ ಬಿಜೆಪಿ ಉತ್ತರ ಪ್ರದೇಶದಲ್ಲಿ ಮಹಿಳೆಯರನ್ನು ನಿರ್ಲಕ್ಷಿಸುತ್ತಿದೆ. ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲಗೊಂಡಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.