ಯುಪಿ ಮೇ 325, ಗುಜರಾತ್ ಮೇ 150 : ಯೋಗಿಯೇ ಸ್ಟಾರ್ ಕ್ಯಾಂಪೇನರ್
Team Udayavani, Mar 28, 2017, 12:03 PM IST
ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ಭರ್ಜರಿ ಗೆಲುವಿನ ಬಳಿಕ ಬಿಜೆಪಿ ವರ್ಷಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್ನಲ್ಲಿ ನಡೆಯುವ ವಿಧಾನ ಸಭಾ ಚುನಾವಣೆಗೆ ತಯಾರಿ ಶುರುವಿಟ್ಟುಕೊಂಡಿದೆ. ಈಗಾಗಲೇ ‘ಯುಪಿ ಮೇ 325, ಗುಜರಾತ್ ಮೇ 150’ ಘೋಷವಾಕ್ಯವನ್ನು ಬಿಡುಗಡೆ ಮಾಡಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪಕ್ಷದ ತಾರಾ ಪ್ರಚಾರಕರಲ್ಲಿ ಒಬ್ಬರಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಯೋಗಿ ಅವರು ಪ್ರಚಾರ ನಡೆಸುವುದರಿಂದ ಬಿಜೆಪಿಗೆ ಅಪಾರ ಲಾಭವಾಗಲಿದೆ.ಮುಖ್ಯಮಂತ್ರಿಯಾಗಿ ಅವರು ಕೈಗೊಳ್ಳುತ್ತಿರುವ ಕಾರ್ಯಗಳನ್ನು ದೇಶದಲ್ಲಿ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲೂ ಚರ್ಚಿಸಲಾಗುತ್ತಿದೆ.ದೊಡ್ಡ ರಾಜ್ಯ ವಾದ ಉತ್ತರಪ್ರದೇಶದಲ್ಲಿ ಮಾಡಿದ ಕೆಲಸಗಳು ಇತರ ರಾಜ್ಯಗಳ ಮೇಲೂ ಪರಿಣಾಮು ಬೀರುತ್ತವೆ ಎಂದು ಬಿಜೆಪಿ ಗುಜರಾತ್ ಘಟಕದ ವಕ್ತಾರ ಭರತ್ ಪಾಂಡ್ಯಾ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಮಾರ್ಚ್ 24 ರಂದು ಗುಜರಾತ್ನ ಸಂಸದರ ಸಭೆ ಕರೆದು ಜನರ ವಿಶ್ವಾಸಗಳಿಸುವ ಸಲುವಾಗಿ ಸಾರ್ವಜನಿಕ ಸೇವಕರಾಗಿ ದಿನ ನಿತ್ಯವೂ ಹೆಚ್ಚುವರಿ ಕೆಲಸ ಮಾಡಬೇಕೆಂದು ಕೇಳಿಕೊಂಡಿದ್ದಾರೆ.
ಕಳೆದ 19 ಷರ್ವಗಳಿಂದ ಗುಜರಾತ್ ಬಿಜೆಪಿ ಆಳ್ವಿಕೆಯಲ್ಲಿದ್ದು, ಹಾಲಿ 182 ಸದಸ್ಯ ಬಲದ ವಿಧಾನ ಸಭೆಯಲ್ಲಿ 123 ಬಿಜೆಪಿ ಶಾಸಕರಿದ್ದಾರೆ.
ಯೋಗಿ ಅವರನ್ನು ರಾಷ್ಟ್ರ ಮಟ್ಟದ ನಾಯಕರನ್ನಾಗಿ ಬಿಂಬಿಸಲು ಮುಂದಾಗಿರುವ ಬಿಜೆಪಿಗೆ ಗುಜರಾತ್ ಚುನಾವಣೆ ಒಂದು ವೇದಿಕೆಯಾಗಿದೆ ಎನ್ನಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.