![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 21, 2021, 11:22 AM IST
ಲಕ್ನೊ : ಕೋವಿಡ್ ಸೋಂಕು ದೇಶದಲ್ಲಿ ಮತ್ತೆ ದಿನ ನಿತ್ಯ ಹಠಾತ್ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಕೋವಿಡ್ ನಿಯಂತ್ರಣ ಮಾಡುವ ಉದ್ದೇಶದಿಂದ ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಹೇರಲಾಗಿದೆ. ಇತ್ತ ದೇಶದಾದ್ಯಂತ ಲಸಿಕೆ ಅಭಿಯಾನ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮೇ. 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ದೇಶದಲ್ಲಿ ಕೋವಿಡ್ ಸೋಂಕು ಮಿತಿ ಮೀರುತ್ತಿದ್ದು, ದೇಶದ ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ ಸೇರಿ ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಹೇರಲಾಗಿದೆ. ಇನ್ನು ಕೆಲವು ರಾಜ್ಯಗಳಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ವೀಕೆಂಡ್ ಲಾಕ್ ಡೌನ್, ನೈಟ್ ಕರ್ಫ್ಯೂ ನಂತಹ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಿನ್ನೆ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಲಾಕ್ ಡೌನ್ ದೇಶಕ್ಕೆ ಈಗ ಅಗತ್ಯವಿಲ್ಲ, ಲಾಕ್ ಡೌನ್ ನನ್ನು ಕೊನೆಯ ಬ್ರಹ್ಮಾಸ್ತ್ರವಾಗಿ ಬಳಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದರು.
ಇದನ್ನೂ ಓದಿ : ಸಮಾಜ ಬಾಂಧವರ ಯೋಗಕ್ಷೇಮ ಸಂಘದ ಮುಖ್ಯ ಧ್ಯೇಯ: ಚಂದ್ರಹಾಸ್ ಶೆಟ್ಟಿ
ಉತ್ತರ ಪ್ರದೆಶದಲ್ಲಿ ಕೋವಿಡ್ ಪ್ರಕರಣ ಸಂಖ್ಯೆಗಳು ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಮುಖ್ಯಮಂತ್ರಿ ಕ್ಯಾಬಿನೆಟ್ ಸಚಿವರ ಜೊತೆ ವರ್ಚುವಲ್ ಸಭೆ ಕರೆದು ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚೆ ಮಾಡಿದ್ದಾರೆ.
ಇನ್ನು, ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ನೀಡುವುದಾಗಿ ಅವರು ಘೋಷಿಸಿದ್ದಾರೆ.
ಈ ಬಗ್ಗೆ ಎಲ್ಲಾ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಉತ್ತರ ಪ್ರದೆಶದ ಆರೋಗ್ಯ ಸಚಿವ ಪ್ರತಾಪ್ ಸಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುರೇಶ್ ಖನ್ನಾ ಅವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.
ರಾಜ್ಯದ ಆರೋಗ್ಯ ಇಲಾಖೆ ಈಗಾಗಲೇ ಹಿರಿಯ ವೈದ್ಯಕೀಯ ತಜ್ಞರುಗಳ ಸಲಹೆಯೊಂದಿಗೆ ಮೇ. 1 ರಂದು ಉಚಿತ ಲಸಿಕೆ ಅಭಿಯಾನವನ್ನು ಆರಂಭಿಸಲು ರೂಪುರೇಷೆಯನ್ನು ಮಾಡುತ್ತಿದೆ. ಮಾತ್ರವಲ್ಲದೇ, ವೆಂಟಿಲೇಟರ್, ಹಾಸಿಗೆ ಹಾಗೂ ಕೋವಿಡ್ ಕೇಂದ್ರಗಳ ಹೆಚ್ಚಳದ ಬಗ್ಗೆಯೂ ಕೂಡ ಚಿಂತನೆ ಮಾಡುತ್ತಿದೆ ಎಂಬ ಮಾಹಿತಿಗಳನ್ನು ಸುದ್ದಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಹಳೆಯಂಗಡಿ ಸಿಡಿಲಿನ ಆಘಾತ: ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಬಾಲಕ ಸಾವು!
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.