ಸುಪ್ರೀಂ ಎಚ್ಚರಿಕೆ: ಕನ್ವರ್ ಯಾತ್ರೆಯನ್ನು ರದ್ದುಗೊಳಿಸಿದ ಉತ್ತರ ಪ್ರದೇಶ ಸರ್ಕಾರ
Team Udayavani, Jul 18, 2021, 7:53 AM IST
ಲಕ್ನೋ: ಈ ಬಾರಿಯ ಕನ್ವರ್ ಯಾತ್ರೆಯನ್ನು ಉತ್ತರ ಪ್ರದೇಶ ಸರ್ಕಾರ ರದ್ದುಗೊಳಿಸಿದೆ. ಕೋವಿಡ್ ಕಾರಣದಿಂದ ಈ ವರ್ಷದ ಕನ್ವರ್ ಯಾತ್ರೆಯನ್ನು ರದ್ದು ಮಾಡಲಾಗಿದೆ.
ಕೋವಿಡ್ ಭೀತಿಯ ನಡುವೆಯೂ ಉತ್ತರ ಪ್ರದೇಶ ಸರ್ಕಾರ ಕನ್ವರ್ ಯಾತ್ರೆ ನಡೆಸಲು ಅನುಮತಿ ನೀಡಿತ್ತು. ಹೀಗಾಗಿ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿದ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು.
ಕನ್ವರ್ ಯಾತ್ರೆಯನ್ನು ನಡೆಸಬೇಕು ಎಂಬ ನಿರ್ಧಾರವನ್ನು ಮರುಪರಿಶೀಲಿಸಲು ಉತ್ತರ ಪ್ರದೇಶ ಸರ್ಕಾರಕ್ಕೆ ನಾವು ಇನ್ನೊಂದು ಅವಕಾಶ ನೀಡುತ್ತೇವೆ. ತಿದ್ದಿಕೊಳ್ಳದಿದ್ದರೆ ನಾವೇ ಆದೇಶ ರವಾನಿಸುತ್ತೇವೆ. ನಾವೆಲ್ಲರೂ ಭಾರತೀಯರು ಮತ್ತು 21ನೇ ಕಾಯ್ದೆಯು ನಮ್ಮೆಲ್ಲರಿಗೂ ಅನ್ವಯವಾಗುತ್ತದೆ. ಧಾರ್ಮಿಕ ಹಾಗೂ ಎಲ್ಲ ಇತರೆ ಭಾವನೆಗಳಿಗಿಂತ ಜನರ ಮೂಲಭೂತ ಹಕ್ಕುಗಳ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕಾಗುತ್ತದೆ. ನೀವೇ ಮರುಪರಿಶೀಲಿಸಿ ಇಲ್ಲವೇ ನಾವೇ ಆದೇಶ ಹೊರಡಿಸುತ್ತೇವೆಂದು ಸುಪ್ರೀಂ ಹೇಳಿತ್ತು.
ಇದನ್ನೂ ಓದಿ:ಡ್ರೋನ್ ನಿಯಂತ್ರಣಕ್ಕೆ ಸ್ವದೇಶಿ ವ್ಯವಸ್ಥೆ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ
ಉತ್ತರ ಪ್ರದೇಶ ಆಡಳಿತವನ್ನು ಪ್ರತಿನಿಧಿಸಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವ್ನಿಶ್ ಅವಸ್ಥಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಮಾಹಿತಿ) ನವನೀತ್ ಸೆಹಗಲ್ ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮುಕುಲ್ ಗೋಯಲ್ ಅವರು ಕನ್ವರ್ ಸಂಘದ ಪ್ರತಿನಿಧಿಗಳೊಂದಿಗೆ ಶನಿವಾರ ಸಭೆ ನಡೆಸಿದರು. ಬಳಿಕ ಯಾತ್ರೆ ರದ್ದಾದ ಬಗ್ಗೆ ಮಾಹಿತಿ ನೀಡಿದರು.
ಶಿವಭಕ್ತರು ಹರಿದ್ವಾರಕ್ಕೆ ಆಗಮಿಸಿ ಅಲ್ಲಿನ ಗಂಗಾ ತಟದಲ್ಲಿ ಮಿಂದು ಗಂಗಾಜಲವನ್ನು ತೆಗೆದುಕೊಂಡು ಹೋಗುತ್ತಾರೆ. ಸಾವಿವಾರು ಮಂದಿ ಇದಕ್ಕಾಗಿ ಸೇರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.