Uttar Pradesh: ಹೋಟೆಲ್‌ಗಳಲ್ಲಿ ಇನ್ನು ಮಾಸ್ಕ್, ಗ್ಲೌವ್ಸ್ ಕಡ್ಡಾಯ!
ಮಾಲೀಕರ ಹೆಸರು, ವಿಳಾಸ ಪ್ರದರ್ಶನವೂ ಕಡ್ಡಾಯ
Team Udayavani, Sep 25, 2024, 6:44 AM IST
ಲಕ್ನೋ: ಹೋಟೆಲ್‌ಗಳಲ್ಲಿ ಅಡುಗೆ ಮಾಡುವವರು ಹಾಗೂ ಅದನ್ನು ತಂದು ಬಡಿಸುವವರು ತಮ್ಮ ಕೆಲಸದ ಸಮಯದಲ್ಲಿ ಮಾಸ್ಕ್ ಹಾಗೂ ಗ್ಲೌಸ್ ಧರಿಸುವುದನ್ನು ಉತ್ತರ ಪ್ರದೇಶ ಸರ್ಕಾರ ಕಡ್ಡಾಯ ಮಾಡಿದೆ. ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಸಂಬಂಧಿಸಿದಂತೆ ಕಠಿಣ ಕಾನೂನುಗಳನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದ್ದು, ಮಾಸ್ಕ್, ಗ್ಲೌಸ್ ಧರಿಸುವುದು ಮತ್ತು ಸಿಸಿಟೀವಿಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ.
ಅಲ್ಲದೇ ಹೋಟೆಲ್‌ಗಳನ್ನು ನಡೆಸುವವರು, ಮಾಲೀಕರು ಮತ್ತು ಮ್ಯಾನೇಜರ್‌ಗಳು ತಮ್ಮ ಹೆಸರುಗಳನ್ನು ಪ್ರದರ್ಶನ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.
ಮಂಗಳವಾರ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, “ಜ್ಯೂಸು, ಮಸೂರ ಬೇಳೆ ಮತ್ತು ಬ್ರೆಡ್‌ಗಳಲ್ಲಿ ಮಾನವ ತ್ಯಾಜ್ಯವನ್ನು ಬಳಕೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂದು ಯೋಗಿ ಆದಿತ್ಯನಾಥ್ ಹೇಳಿದರು. ತಿರುಪತಿ ಲಡ್ಡುವಿನಲ್ಲಿ ಕಲಬೆರಕೆಯಾಗಿದೆ ಎಂಬ ವಿವಾದದ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.