ಉ.ಪ್ರ. ಸಚಿವರ ಕಾರು ಢಿಕ್ಕಿಯಾಗಿ ಓರ್ವನ ಸಾವು; ಮದ್ಯದ ಬಾಟಲಿ ಪತ್ತೆ
Team Udayavani, Jan 3, 2017, 11:13 AM IST
ಲಕ್ನೋ : ಉತ್ತರ ಪ್ರದೇಶದ ಪ್ರವಾಸೋದ್ಯಮ ಸಚಿವ ಓಂ ಪ್ರಕಾಶ್ ಸಿಂಗ್ ಅವರ ಕಾರು ನಿನ್ನೆ ರಾತ್ರಿ ಮಂಗಳವಾರ ರಾತ್ರಿ ಹರದೋಯಿ ಎಂಬಲ್ಲಿ ಕೈಗಾಡಿಯೊಂದಕ್ಕೆ ಢಿಕ್ಕಿ ಹೊಡೆದು ಓರ್ವನನ್ನು ಬಲಿ ಪಡೆದಿದೆ.
ಢಿಕ್ಕಿ ಹೊಡೆದ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದ್ದು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಸುಪರಿಂಟೆಂಡೆಂಟ್ ರಾಜೀವ್ ಮಲ್ಹೋತ್ರಾ ತಿಳಿಸಿದ್ದಾರೆ.
ಕಾರು ಚಾಲಕನನ್ನು ಬಂಧಿಸಲಾಗಿದ್ದು ಪ್ರಕರಣದ ತನಿಖೆ ನಡೆಯುತ್ತಿದೆ ಎಂದವರು ಹೇಳಿದ್ದಾರೆ.
ಸಚಿವ ಪ್ರಕಾಶ್ ಸಿಂಗ್ ಅವರು ಗಾಜಿಯಾಪುರದ ಜಮಾನಿಯಾ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕರಾಗಿದ್ದಾರೆ. ಕಾರು ಅಪಘಾತಕ್ಕೆ ಸ್ವಲ್ಪ ಮೊದಲು ಸಿಂಗ್ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ “ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ಅನೈತಿಕ ಸಂತಾನದವರಾಗಿದ್ದಾರೆ; ಮೋದಿ ಒಬ್ಬ ದೊಡ್ಡ ಸುಳ್ಳುಗಾರ. ಅವರು ಅಭಿವೃದ್ಧಿ ಸಾಧನೆಯ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಿದ್ದಾರೆ; ಆದರೆ ವಾಸ್ತವದಲ್ಲಿ ಅವರು ಯಾವ ಅಭಿವೃದ್ಧಿಯನ್ನೂ ಸಾಧಿಸಿಲ್ಲ’ ಎಂದು ಜರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
Maha Kumbh; ಜಾಗ ಕೇಳಿದರೆ ಹುಷಾರ್: ವಕ್ಫ್ ಬೋರ್ಡ್ಗೆ ಎಚ್ಚರಿಕೆ ನೀಡಿದ ಯೋಗಿ
Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?
MUST WATCH
ಹೊಸ ಸೇರ್ಪಡೆ
ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ
Naxal Surrender: ನಕ್ಸಲ್ ಶರಣಾಗತಿ ಪೂರ್ವಯೋಜಿತ ಸ್ಟೇಜ್ ಶೋ ಅಲ್ಲವೇ?
Finance Debt: ಫೈನಾನ್ಸ್ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!
Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ
Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.