ಆಕ್ಸಿಜನ್ ಕೊರತೆಯಿಂದ ಪ್ರಾಣ ಬಿಟ್ಟ ನವಜಾತ ಅವಳಿ ಶಿಶುಗಳು
Team Udayavani, Apr 25, 2021, 9:34 AM IST
ಲಖನೌ (ಉತ್ತರಪ್ರದೇಶ) : ಆಸ್ಪತ್ರೆಯೊಂದರಲ್ಲಿ ಆಕ್ಸಿಜನ್ ಇಲ್ಲದ ಕಾರಣ ಇಬ್ಬರು ನವಜಾತ ಶಿಶುಗಳು ಮೃತಪಟ್ಟ ಘಟನೆ ಶನಿವಾರ ರಾತ್ರಿ ಉತ್ತರಪ್ರದೇಶದ ಬಾರ್ಬಂಕಿಯಲ್ಲಿರುವ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.
ಇಲ್ಲಿನ ಬಾರ್ಬಂಕಿಯಲ್ಲಿರುವ ಎರಡು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಇದೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಲಾಗಿತ್ತು. ಆದರೂ ಕೂಡ ವೈದ್ಯಕೀಯ ಆಮ್ಲಜನಕವನ್ನು ಪೂರೈಕೆ ಮಾಡಿರಲಿಲ್ಲ. ಈ ಕಾರಣದಿಂದ ಶನಿವಾರ ರಾತ್ರಿ ಅವಳಿ ಮಕ್ಕಳು ಸಾವನ್ನಪ್ಪಿವೆ.
ಶನಿವಾರ ಹುಟ್ಟಿದ ಆ ಅವಳಿ ಮಕ್ಕಳಿಗೆ ಆಕ್ಸಿಜನ್ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದರು. ಆದ್ರೆ ಆಸ್ಪತ್ರೆಯಲ್ಲಿ ಶಿಶುಗಳಿಗೆ ನೀಡಲು ಆಮ್ಲಜನಕ ಇರಲಿಲ್ಲ. ಈ ಕಾರಣದಿಂದ ಮಕ್ಕಳು ಮೃತಪಟ್ಟಿವೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.
ಇತ್ತೀಚೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಾತನಾಡಿದ್ದು, ನಮ್ಮಲ್ಲಿ ಆಮ್ಲಜನಕದ ಕೊರತೆಯಿಲ್ಲ. ಕಾಳಸಂತೆಯಲ್ಲಿ ಆಕ್ಸಿಜನ್ ಮಾರುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರೂ. ಆದ್ರೆ ಇದೀಗ ಲಖನೌ ಆಸ್ಪತ್ರೆಯಲ್ಲಿ ನಡೆದಿರುವ ಈ ಘಟನೆಯಿಂದ ಜನರು ಸರ್ಕಾರವನ್ನು ಪ್ರಶ್ನೆ ಮಾಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.