ಉತ್ತರ ಪ್ರದೇಶಕ್ಕೆ ಗರಿಷ್ಠ ಸ್ಥಾನ
Team Udayavani, May 31, 2019, 6:00 AM IST
ನವದೆಹಲಿ: ಬಹು ನಿರೀಕ್ಷಿತ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಸಚಿವ ಸಂಪುಟದ ಪದಗ್ರಹಣ ರಾಷ್ಟ್ರಪತಿ ಭವನದಲ್ಲಿ ನಡೆದಿದೆ. ಹಳೆಯ ಮತ್ತು ಹೊಸ ಮುಖಗಳಿಗೆ ಸಮಾನವಾಗಿ ಅವಕಾಶ ನೀಡುವ ಪ್ರಯತ್ನ ನಡೆದಿದೆ. ವಿವಿಧ ಮಾಧ್ಯಮಗಳಲ್ಲಿ ಇಂಥವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಪ್ರಸಾರವಾಗುತ್ತಲೇ ಇತ್ತು. ಅಂತಿಮವಾಗಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಖುದ್ದಾಗಿ ಕರೆ ಬಂದಾಗಲೇ ಇಂಥವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಸ್ಪಷ್ಟವಾಗಿ ಗೊತ್ತಾಗಿದ್ದು. ಹಿಂದಿನ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ಹೊಂದಿದ್ದ ಅರುಣ್ ಜೇಟ್ಲಿ (ಹಣಕಾಸು) ಮತ್ತು ಸುಷ್ಮಾ ಸ್ವರಾಜ್ (ವಿದೇಶಾಂಗ) ಮಾತ್ರ ಹಾಲಿ ಸಾಲಿನಲ್ಲಿ ಪ್ರಮಾಣ ವಚನ ಸ್ವೀಕರಿಸಿಲ್ಲ. ಹೀಗಾಗಿ, ಹಳೆಯ ಮತ್ತು ಹೊಸ ಮುಖಗಳಿಗೆ ಸಮಾನ ಆದ್ಯತೆ ನೀಡುವ ನಿಟ್ಟಿನಲ್ಲಿ ಮೋದಿ-ಶಾ ಜೋಡಿ ಅವಕಾಶ ನೀಡಿದೆ ಎಂದರೆ ತಪ್ಪಾಗಲಾರದು.
ರಾಜನಾಥ್ ಸಿಂಗ್ ಎರಡನೇಯವರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಎರಡನೇ ಅವಧಿಗೂ ಮೋದಿ ಸಂಪುಟದಲ್ಲಿ ನಂ.2ರ ಸ್ಥಾನದಲ್ಲಿಯೇ ಉಳಿಯಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಕೊನೆಯ ಹಂತದ ವರೆಗೂ ಅಮಿತ್ ಶಾ ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆಯೇ ಎಂಬ ಬಗ್ಗೆ ಕುತೂಹಲ ಉಳಿಸಿಕೊಳ್ಳಲಾಗಿತ್ತು. ಅದೇ ರೀತಿ ವಿದೇಶಾಂಗ ಕಾರ್ಯದರ್ಶಿಯಾಗಿ ನಿವೃತ್ತರಾಗಿರುವ ಸುಬ್ರಹ್ಮಣ್ಯಂ ಜೈಶಂಕರ್ ಸಂಪುಟ ಸೇರ್ಪಡೆಯಾಗುವುದು ಅಚ್ಚರಿಗೆ ಕಾರಣವಾಗಿತ್ತು. ಕಳೆದ ಬಾರಿಯ ಸಂಪುಟದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವರಾಗಿದ್ದ ರಾಧಾಮೋಹನ್ ಸಿಂಗ್‌ಗೆ ಈ ಬಾರಿ ಅವಕಾಶ ನೀಡಲಾಗಿಲ್ಲ. ಮಾಜಿ ಒಲಿಂಪಿಯನ್ ರಾಜ್ಯವರ್ಧನ ಸಿಂಗ್ ರಾಥೋಡ್‌ಗೆ ಈ ಬಾರಿ ಅವಕಾಶ ನೀಡಲಾಗಿಲ್ಲ.
ಹಳಬರು-ಹೊಸಬರು: ಎರಡನೇ ಅವಧಿಯ ಮೋದಿ ಸಂಪುಟದಲ್ಲಿ 36 ಮಂದಿ ಹಾಲಿ ಸಚಿವರು ಎರಡನೇ ಬಾರಿಗೆ ಸಚಿವ ಸ್ಥಾನ ಪಡೆದುಕೊಂಡಿದ್ದರೆ, 20 ಮಂದಿ ಸಂಸದರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಕರ್ನಾಟಕದ ಸಂಸದರಾಗಿರುವ ಸುರೇಶ್ ಅಂಗಡಿ, ಪ್ರಹ್ಲಾದ್ ಜೋಶಿ, ಶಿವಸೇನೆಯ ಸಂಸದ ಅರವಿಂದ ಸಾವಂತ್, ಜಾಕ್ ಂಡ್ ಮಾಜಿ ಸಿಎಂ ಅರ್ಜುನ್ ಮುಂಡಾ, ಜಾರ್ಖಂಡ್ ಮಾಜಿ ಸಿಎಂ ರಮೇಶ್ ಪೋಖ್ರೀಯಾಲ್, ಮಹಾರಾಷ್ಟ್ರದ ರಾವ್ ಸಾಹೇಬ್ ದನ್ವೆ, ಒಡಿಶಾದ ಸರಳ ವ್ಯಕ್ತಿ ಎಂದು ಹೆಗ್ಗಳಿಕೆ ಪಡೆದಿರುವ ಪ್ರತಾಪ್ ಚಂದ್ರ ಸಾರಂಗಿ ಮೊದಲ ಬಾರಿಗೆ ಸ್ಥಾನ ಪಡೆದಿರುವವರಲ್ಲಿ ಸೇರಿದ್ದಾರೆ. ಇನ್ನು ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಡಿ.ವಿ.ಸದಾನಂದ ಗೌಡ, ಪಿಯೂಷ್ ಗೋಯಲ್ ರಾಮ್ ವಿಲಾಸ್ ಪಾಸ್ವನ್ ಸೇರಿದಂತೆ ಹಲವು 2ನೇ ಬಾರಿಗೆ ಅವಕಾಶ ಪಡೆದುಕೊಂಡಿದ್ದಾರೆ.
ಸ್ಥಾನ ಪಡೆಯದ ಅಪ್ನಾ ದಳ: ನರೇಂದ್ರ ಮೋದಿ ನೇತೃತ್ವದ ಮೊದಲ ಸರ್ಕಾರದ ಅವಧಿಯಲ್ಲಿ ಸಚಿವ ಸ್ಥಾನ ಪಡೆದಿದ್ದ ಅಪ್ನಾ ದಳ ಎರಡನೇ ಅವಧಿಯಲ್ಲಿ ಸ್ಥಾನ ಪಡೆದುಕೊಳ್ಳಲು ವಿಫಲವಾಗಿದೆ.
ಸಂಪುಟದಲ್ಲಿ 6 ಮಹಿಳೆಯರು
ಈ ಬಾರಿಯ ಮೋದಿ ಸಂಪುಟದಲ್ಲಿ ಆರು ಮಹಿಳೆಯರಿದ್ದಾರೆ. ಕ್ಯಾಬಿನೆಟ್ ದರ್ಜೆಯಲ್ಲಿ ನಿರ್ಮಲಾ ಸೀತಾರಾಮನ್, ಸ್ಮತಿ ಇರಾನಿ, ಹರ್‌ಸಿಮ್ರತ್ ಕೌರ್ ಬಾದಲ್ ಇದ್ದರೆ, ರೇಣುಕಾ ಸಿಂಗ್ ಸರುತ, ದೇಬಶ್ರೀ ಚೌಧರಿ, ಸಾಧ್ವಿ ನಿರಂಜನಾ ಜ್ಯೋತಿ ರಾಜ್ಯ ಸಚಿವೆಯರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಮಲಾ ಕಳೆದ ಬಾರಿ ರಕ್ಷಣಾ ಖಾತೆಯನ್ನು ನಿರ್ವಹಿಸಿದ್ದರು. ಇನ್ನು ಸ್ಮತಿ ಇರಾನಿ ಮಾನವ ಸಂಪನ್ಮೂಲ ಹಾಗೂ ಜವಳಿ ಖಾತೆಗಳನ್ನು ನಿರ್ವಹಿಸಿದ್ದರು. ಹರ್‌ಸಿಮ್ರತ್ ಕೌರ್ ಆಹಾರ ಸಂಸ್ಕರಣಾ ಖಾತೆ ಸಚಿವೆಯಾಗಿದ್ದರು. ಈ ಮೂವರೂ ಎರಡನೇ ಅವಧಿಗೆ ಮುಂದುವರಿದಿದ್ದರೆ, ಸಹಾಯಕ ದರ್ಜೆ ಸಚಿವರಾಗಿ ಪ್ರಮಾಣ ಸ್ವೀಕರಿಸಿರುವ ಮೂವರು ಸಂಸದೆಯರು ಮೊದಲ ಬಾರಿಗೆ ಸಂಪುಟ ಸೇರುತ್ತಿದ್ದಾರೆ.
ಸಂಪುಟದಲ್ಲಿ ನಿವೃತ್ತ ಅಧಿಕಾರಿಗಳು
ಮೋದಿ ಸರ್ಕಾರದಲ್ಲಿ ಹಲವಾರು ನಿವೃತ್ತ ಅಧಿಕಾರಿಗಳು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿದೇಶಾಂಗ ಇಲಾಖೆ ಮಾಜಿ ಕಾರ್ಯದರ್ಶಿ, ಸುಬ್ರಹ್ಮಣ್ಯಂ ಜೈಶಂಕರ್ ಸಚಿವರಾಗಿ ಆಯ್ಕೆಯಾಗಿದ್ದಾರೆ. ಅವರು ರಾಜ್ಯಸಭೆ ಮೂಲಕ ಸಂಸತ್ ಪ್ರವೇಶಿಸಲಿದ್ದಾರೆ. ಭೂಸೇನಾ ನಿವೃತ್ತ ಮುಖ್ಯಸ್ಥ ಜ. ವಿ.ಕೆ.ಸಿಂಗ್ 2ನೇ ಬಾರಿಗೆ ಕೇಂದ್ರಸಚಿವರಾಗಿದ್ದಾರೆ. ಪಂಜಾಬ್ ಮೂಲದ ಅಧಿಕಾರಿ ಹರ್ದೀಪ್ ಸಿಂಗ್ ಪುರಿ 2ನೇ ಬಾರಿಗೆ ಸಚಿವರಾಗಿದ್ದಾರೆ. ಅವರು ವಿದೇಶಾಂಗ ಸಚಿವಾಲಯದ ಮಾಜಿ ಕಾರ್ಯದರ್ಶಿ, ವಿಶ್ವ ಸಂಸ್ಥೆ ಭದ್ರತಾ ಆಯೋಗದ ಅಧ್ಯಕ್ಷರೂ ಆಗಿದ್ದರು. ನಿವೃತ್ತ ಐಎಎಸ್ ಅಧಿಕಾರಿ, ಜಲಂಧರ್‌ನ ನಿವೃತ್ತ ಜಿಲ್ಲಾಧಿಕಾರಿ ಸೋಮ ಪ್ರಕಾಶ್, ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸೇರಿದ್ದಾರೆ. ಕೇಂದ್ರ ಗೃಹ ಖಾತೆ ನಿವೃತ್ತ ಕಾರ್ಯದರ್ಶಿ ಆರ್.ಕೆ. ಸಿಂಗ್ ಮತ್ತೂಮ್ಮೆ ಕೇಂದ್ರದಲ್ಲಿ ಸಚಿವರಾಗಿದ್ದಾರೆ.
ತಡವರಿಸಿದ ಕಿಶನ್ ರೆಡ್ಡಿ
ಘಟಾನುಘಟಿಗಳೇ ಸಂಪುಟದಿಂದ ಹೊರಕ್ಕೆ
ಹಾಲಿ ಸಾಲಿನಲ್ಲಿ ಘಟಾನುಘಟಿಗಳೇ ಮೋದಿ ಸಂಪುಟದಿಂದ ಹೊರಗೆ ಉಳಿದಿದ್ದಾರೆ. ಆರೋಗ್ಯದ ಕಾರಣದಿಂದ ಅರುಣ್ ಜೇಟ್ಲಿ ಹಾಗೂ ಸುಷ್ಮಾ ಸ್ವರಾಜ್ ಹೊರಗುಳಿದಿದ್ದಾರೆ. ಗುರುವಾರ ಪ್ರಮಾಣ ವಚನ ಸ್ವೀಕರಿಸುವ ಸಚಿವರ ಸಂಭಾವ್ಯ ಪಟ್ಟಿಯಲ್ಲಿ ಸುಷ್ಮಾ ಸ್ವರಾಜ್ 2ನೇ ಬಾರಿಗೆ ಸಚಿವರಾಗಲಿದ್ದಾರೆ ಎಂದೇ ವಿಶ್ಲೇಷಿಸಲಾಗಿತ್ತು. ಹಿಂದಿನ ಸಾಲಿನಲ್ಲಿ ಆರೋಗ್ಯ ಸಚಿವರಾಗಿದ್ದ ಜೆ.ಪಿ.ನಡ್ಡಾ ಸಂಪುಟದಲ್ಲಿಲ್ಲ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೇಂದ್ರ ಸಂಪುಟಕ್ಕೆ ಸೇರಿರುವುದರಿಂದ ಪಕ್ಷದ ನೇತೃತ್ವವನ್ನು ನಡ್ಡಾಗೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಉಳಿದಂತೆ ಸುರೇಶ್ ಪ್ರಭು, ಮಹೇಶ್ ಶರ್ಮಾ, ರಾಜ್ಯವರ್ಧನ ಸಿಂಗ್ ಸಿಂಗ್ ರಾಥೋಡ್, ಜಯಂತ್ ಸಿನ್ಹಾ, ಸತ್ಯಪಾಲ್ ಸಿಂಗ್, ಕರ್ನಾಟಕದಿಂದ ಅನಂತಕುಮಾರ್ ಹೆಗಡೆ ಕೂಡ ಸಂಪುಟದಲ್ಲಿ ಸ್ಥಾನ ಪಡೆದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
MUST WATCH
ಹೊಸ ಸೇರ್ಪಡೆ
BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.