ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ : ಟ್ಯಾಂಕರ್ ಗೆ ಬೆಂಕಿ ಹತ್ತಿಕೊಂಡು ಇಬ್ಬರು ಸಜೀವ ದಹನ
Team Udayavani, Oct 2, 2022, 11:19 AM IST
ಉತ್ತರ ಪ್ರದೇಶ : ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದು ಎಥೆನಾಲ್ ಟ್ಯಾಂಕರ್‌ಗೆ ಬೆಂಕಿ ತಗುಲಿ ಇಬ್ಬರು ಸಾವನ್ನಪ್ಪಿದ್ದ ಘಟನೆ ಸೀತಾಪುರ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಬೆಳ್ಳಂಬೆಳಗ್ಗೆ ಸೀತಾಪುರ ಗ್ರಾಮದಲ್ಲಿ ಭತ್ತ ತುಂಬಿದ ಟ್ರ್ಯಾಕ್ಟರ್ ಟ್ರಾಲಿಗೆ ಎಥೆನಾಲ್ ತುಂಬಿದ ಟ್ಯಾಂಕರ್ ಢಿಕ್ಕಿ ಹೊಡೆದು ಪಲ್ಟಿಯಾಗಿದೆ ಈ ವೇಳೆ ಟ್ಯಾಂಕರ್ ಗೆ ಬೆಂಕಿ ಹತ್ತಿಕೊಂಡು ಇಬ್ಬರು ಸಾವನ್ನಪ್ಪಿ ಆರು ಮಂದಿ ಗಾಯಗೊಂಡಿದ್ದಾರೆ.
ಮೃತರಿಬ್ಬರನ್ನು ಆಕಾಶ್ ಮಿಶ್ರಾ ಮತ್ತು ಪವನ್ ಮಿಶ್ರಾ ಎಂದು ಗುರುತಿಸಲಾಗಿದೆ.
ಬಿಸ್ವಾ ಸಕ್ಕರೆ ಕಾರ್ಖಾನೆಯಿಂದ ಬಂದ ಎಥೆನಾಲ್ ಟ್ಯಾಂಕರ್ ತಂಗಂವ್ ಪೊಲೀಸ್ ಠಾಣಾ ವ್ಯಾಪ್ತಿಯ ಮುರತ್‌ಪುರ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿಗೆ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎಂದು ಸೀತಾಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸುಶೀಲ್ ಚಂದ್ರ ಭಾನ್ ತಿಳಿಸಿದ್ದಾರೆ. ಸಕ್ಕರೆ ಕಾರ್ಖಾನೆಯಿಂದ ಗೊಂಡಾ ಜಿಲ್ಲೆಯ ಕಡೆಗೆ ಟ್ಯಾಂಕರ್ ಹೋಗುತ್ತಿತ್ತು ಎನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಇತರ ಆರು ಮಂದಿಯನ್ನು ಸೀತಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
#WATCH Uttar Pradesh: A collision took place between a tank filled with ethanol and a tractor trolley took place in Sitapur after which the tanker caught fire due. Police teams have reached the spot. pic.twitter.com/io1ws7i0Pp
— ANI UP/Uttarakhand (@ANINewsUP) October 2, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.