ಚಮೋಲಿ ದುರಂತ: 32 ಮೃತದೇಹ ಪತ್ತೆ, 197 ಮಂದಿ ನಾಪತ್ತೆ, ಮುಂದುವರಿದ ಶೋಧ ಕಾರ್ಯ
Team Udayavani, Feb 10, 2021, 9:40 AM IST
ನವದೆಹಲಿ: ಉತ್ತರಾಖಂಡದ ಚಮೋಲಿಯಲ್ಲಿ ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಹಿಮನದಿ ಸ್ಫೋಟದಿಂದ ಉಂಟಾದ ಪ್ರವಾಹದಿಂದ 197 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು ಸ್ಥಳದಲ್ಲಿ ಶೋಧ ಕಾರ್ಯ ಮುಂದುವರೆದಿದೆ.
ಅಲಕಾನಂದ ಮತ್ತು ದೌಲಿಗಂಗದಲ್ಲಿ ನಡೆದ ಈ ದುರಂತದಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ತಫೋವನ್ ಹೈಡ್ರೋಪವರ್ ಯೋಜನೆ ಮತ್ತು ರಿಷಿಗಂಗಾದ ಹೈಡೆಲ್ ಪ್ರೋಜೆಕ್ಟ್ ಗೆ ಭಾರೀ ಹಾನಿಯಾಗಿದ್ದು, ಪ್ರವಾಹದ ಕಾರಣದಿಂದ ಹಲವಾರು ಮನೆಗಳು ಕೂಡ ಕೊಚ್ಚಿಹೋಗಿದೆ ಎಂದು ವರದಿಯಾಗಿದೆ.
ಸುಮಾರು 600 ಮಂದಿ ಭಾರತೀಯ ಸೇನಾ ಯೋಧರು, ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ), ಎನ್ ಡಿ ಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳು ಚಮೋಲಿ ಜಿಲ್ಲೆಯಲ್ಲಿ ಕಾರ್ಯಾಚರಣೆ ಮುಮದುವರೆಸಿದೆ,
ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಏರಿಕೆ: ಗ್ರಾಹಕರು ಕಂಗಾಲು
ರೈನಿ ಗ್ರಾಮದಲ್ಲಿ ಕುಸಿದು ಬಿದ್ದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿದ್ದ ಐವರ ಮೃತದೇಹಗಳನ್ನು ಹೊರಗೆಳೆಯಲಾಗಿದೆ. ತಪೋವನ ವಿದ್ಯುತ್ ಯೋಜನೆಯ ಸ್ಥಳದಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ಟನೆಲ್ನೊಳಗೆ ಸಿಲುಕಿಕೊಂಡಿದ್ದು, 2 ದಿನಗಳಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಪ್ರವಾಹದಿಂದ ಸಂಪರ್ಕ ಕಡಿದುಕೊಮಡ 123 ಗ್ರಾಮಗಳಿಗೆ ಹೆಲಿಕಾಫ್ಟರ್ ಮೂಲಕ 100 ಕ್ಕೂ ಅಧಿಕ ಪಡಿತರ ಕಿಟ್ ವಿತರಿಸಲಾಗಿದೆ. ಉತ್ತರಖಾಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಹಾನಿಗೆ ಒಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಚಮೋಲಿಯಲ್ಲಿ ಸಂಭವಿಸಿದ ದುರಂತಕ್ಕೆ 1965ರಲ್ಲಿ ಪತ್ತೆಯಾಗಿದ್ದ ವಿಕಿರಣಶೀಲ ಸಾಧನವೇ ಕಾರಣವಾಗಿರಬಹುದು ಎಂದು ರೈನಿ ಗ್ರಾಮಸ್ಥರು ಈಗ ಸಂಶಯ ವ್ಯಕ್ತಪಡಿಸತೊಡಗಿದ್ದಾರೆ.
ಇದನ್ನೂ ಓದಿ: ಅಧಿಕಾರಿಗೆ ಮಸಿ ಬಳಿಯಲು ಘೋಷಿಸಿದ್ದ 1 ಲಕ್ಷ ರೂ. ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ: ಪ್ರತಿಭಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.