ವರಿಷ್ಠರ ವಿರುದ್ಧ ಗೆದ್ದರೇ ರಾವತ್? ಉತ್ತರಾಖಂಡ ಪ್ರಚಾರಕ್ಕೆ ಮಾಜಿ ಸಿಎಂ ನೇತೃತ್ವ
Team Udayavani, Dec 24, 2021, 10:30 PM IST
ನವದೆಹಲಿ: ಪಂಜಾಬ್‌ನ ಕಾಂಗ್ರೆಸ್ ಘಟಕದಲ್ಲಿ ಉಂಟಾಗಿದ್ದ ಬಿಕ್ಕಟ್ಟು ಉತ್ತರಾಖಂಡದಲ್ಲಿ ಪುನರಾವರ್ತನೆ ಯಾಗದಂತೆ ನೋಡಿಕೊಳ್ಳುವಲ್ಲಿ ಆ ಪಕ್ಷದ ವರಿಷ್ಠರು ಸದ್ಯಕ್ಕೆ ಯಶಸ್ವಿಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರೇ ಉತ್ತರಾಖಂಡದಲ್ಲಿ ಕಾಂಗ್ರೆಸ್‌ನ ಪ್ರಚಾರದ ನೇತೃತ್ವ ವಹಿಸಲಿದ್ದಾರೆ.
ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಚುನಾವಣೆ ನಡೆದು ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗುತ್ತದೆ. ಸಂಘಟನೆಗೆ ಸಹಕರಿಸುತ್ತಿಲ್ಲವೆಂದು ಬಹಿರಂಗವಾಗಿ ಟೀಕಾ ಪ್ರಹಾರ ನಡೆಸಿದ ಬಳಿಕ ರಾವತ್ ಶುಕ್ರವಾರ ನವದೆಹಲಿಗೆ ಆಗಮಿಸಿ, ಸಂಸದ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, “ಪ್ರಚಾರ ಸಮಿತಿಯ ಮುಖ್ಯಸ್ಥನಾಗಿ ನಾನು ಇರಲಿದ್ದೇನೆ. ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ನಂತರ ನಿರ್ಧರಿಸಲಾಗುತ್ತದೆ’ ಎಂದರು.
ಈ ಮೂಲಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ತಮ್ಮ ಮಾತೇ ನಡೆಯಬೇಕು ಎಂಬ ಅಂಶವನ್ನೂ ವರಿಷ್ಠರಿಗೆ ಮನವಿ ಮಾಡಿ ಗೆದ್ದಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಜಮ್ಮು-ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಉಗ್ರ ಫಿನಿಶ್
ಮೂರೇ ತಿಂಗಳಲ್ಲಿ ಟಿಎಂಸಿಗೆ ವಿದಾಯ
ಗೋವಾ ವಿಧಾನಸಭೆಯ 40 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆಲ್ಲುವ ಆಶಯವನ್ನು ತೃಣಮೂಲ ಕಾಂಗ್ರೆಸ್ ಈಗಾಗಲೇ ವ್ಯಕ್ತಪಡಿಸಿದೆ. ಈ ಹುಮ್ಮಸ್ಸಿಗೆ ಧಕ್ಕೆ ತರುವ ಬೆಳವಣಿಗೆಯಲ್ಲಿ ಮೂರು ತಿಂಗಳ ಹಿಂದೆ ಪಕ್ಷ ಸೇರಿದ್ದ ಮಾಜಿ ಶಾಸಕ ಲಾವೂ ಮಾಮ್ಲಾತ್‌ದಾರ್ ರಾಜೀನಾಮೆ ನೀಡಿದ್ದಾರೆ.
ಪೋಂಡಾ ಕ್ಷೇತ್ರದ ಮಾಜಿ ಶಾಸಕರಾಗಿರುವ ಅವರು “ಗೋವಾದಲ್ಲಿ ಹಿಂದೂಗಳು ಮತ್ತು ಕ್ರಿಶ್ಚಿಯನ್ ಸಮುದಾಯದ ನಡುವೆ ಕಂದಕ ಸೃಷ್ಟಿಸಲು ಯತ್ನಿಸುತ್ತಿದೆ. ಅದು ಯೋಜನೆ ಜಾರಿ ನೆಪದಲ್ಲಿ ವಿವರಗಳನ್ನು ಸಂಗ್ರಹಿಸುತ್ತಿದೆ. ಟಿಎಂಸಿ ಜಾತ್ಯತೀತ ಪಕ್ಷವಾಗಿರಬಹುದೆಂದು ನಂಬಿದ್ದೆ’ ಎಂದು ಹೇಳಿದ್ದಾರೆ. ಇದೇ ಪಂಜಾಬ್ ಚುನಾವಣೆಗಾಗಿ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಭೇಟಿ ನೀಡಿದ ಬಳಿಕ ಪರಿಶೀಲನೆ: ಸಿಇಸಿ
ವಿಧಾನಸಭೆ ಚುನಾವಣೆ ಸಿದ್ಧತೆ ಪರಿಶೀಲಿಸುವ ನಿಟ್ಟಿನಲ್ಲಿ ಮುಂದಿನ ವಾರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮತ್ತು ಇನ್ನಿಬ್ಬರು ಚುನಾವಣಾ ಆಯುಕ್ತರು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಉ.ಪ್ರ.ವಿಧಾನಸಭೆ ಚುನಾವಣೆಯನ್ನು ಮುಂದೂಡಬಹುದು ಎಂಬ ಅಲಹಾಬಾದ್ ಹೈಕೋರ್ಟ್‌ನ ಸಲಹೆ ಪ್ರತಿಕ್ರಿಯೆ ನೀಡಿದ ಮುಖ್ಯ ಚುನಾವಣಾ ಆಯುಕ್ತರು, ಮುಂದಿನ ವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ, ವ್ಯವಸ್ಥೆ ಹಾಗೂ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಹೈಕೋರ್ಟ್ ಸಲಹೆಯನ್ನು ಪರಿಶೀಲಿಸಲಾಗುತ್ತದೆ ಎಂದು ಸುಶೀಲ್‌ಚಂದ್ರ ಹೇಳಿದ್ದಾರೆ. ಉತ್ತರಾಖಂಡದಲ್ಲಿಯೂ ಕೊರೊನಾದ ಬಗ್ಗೆ ಮಾಹಿತಿ ಪಡೆದುಕೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಡಿ.27ರಂದು ಸಭೆ:
ಹೆಚ್ಚುತ್ತಿರುವ ಕೊರೊನಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕಾರಿಗಳ ನಡುವೆ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಚುನಾವಣೆ ನಡೆಸುವ ಬಗ್ಗೆಯೂ ಚರ್ಚಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.