Uttarkashi: ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ಮಾನಸಿಕ ಒತ್ತಡ ನಿವಾರಿಸಲು ಅಗತ್ಯ ಕ್ರಮ
ಕೈಯಿಂದಲೇ ಕೊರೆಯಲು ಮುಂದಾದರೆ ಕ್ರಿಸ್ಮಸ್ ವೇಳೆಗೆ ಕಾರ್ಮಿಕರ ರಕ್ಷಣೆ
Team Udayavani, Nov 26, 2023, 10:51 AM IST
ಉತ್ತರಕಾಶಿ: ಸಿಲ್ಕ್ಯಾರಾ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡೆತಡೆಗಳು ಎದುರಾದ ನಂತರ, ಒತ್ತಡವನ್ನು ಕಡಿಮೆ ಮಾಡಲು ಇಲ್ಲಿನ ಅಧಿಕಾರಿಗಳು ಒಳಗೆ ಸಿಕ್ಕಿಬಿದ್ದ 41 ಕಾರ್ಮಿಕರಿಗೆ ಮೊಬೈಲ್ ಫೋನ್ ಮತ್ತು ಕ್ಯಾರಮ್ ಬೋರ್ಡ್ ಗೇಮ್‌ಗಳನ್ನು ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ಮಾಹಿತಿ ನೀಡಿದ್ದಾರೆ.
ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದಲ್ಲಿ ಕೊರೆಯಲು ಬಳಸಲಾಗಿದ್ದ ಆಗರ್ ಯಂತ್ರದ ಬ್ಲೇಡ್ ಅವಶೇಷಗಳಲ್ಲಿ ಸಿಲುಕಿದ್ದರಿಂದ ಕಾಮಗಾರಿಗೆ ಅಡ್ಡಿಯುಂಟಾಗಿದ್ದು, ಕಾರ್ಮಿಕರನ್ನು ಸ್ಥಳಾಂತರಿಸಲು ಇನ್ನೂ ಹಲವು ದಿನಗಳು ಬೇಕಾಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ 15 ದಿನಗಳಿಂದ 41 ಕಾರ್ಮಿಕರು ಸಿಕ್ಕಿಬಿದ್ದಿರುವ ಉತ್ತರಾಖಂಡದ ಉತ್ತರಕಾಶಿಯಲ್ಲಿ ಕುಸಿದ ಸುರಂಗದಲ್ಲಿ ಕೈಯಿಂದ ಕೊರೆಯುವ ಕೆಲಸ ಭಾನುವಾರ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೈಯಿಂದಲೇ ಕೊರೆಯಲು ಮುಂದಾದರೆ ಕಾರ್ಯಾಚರಣೆ ವಿಳಂಬವಾಗಲಿದ್ದು ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ ಮುಂದಿನ ತಿಂಗಳು ಕ್ರಿಸ್ಮಸ್ ವೇಳೆಗೆ ಕಾರ್ಮಿಕರನ್ನು ರಕ್ಷಣೆ ಮಾಡಿ ಹೊರತೆಗೆಯುವ ಕೆಲಸ ನಡೆಯಲಿದೆ ಎಂದು ಹೇಳಲಾಗಿದೆ. ಈ ನಡುವೆ ಮೇಲಿನಿಂದ ಕೊರೆಯುವ ಸಾಹಸಕ್ಕೂ ರಕ್ಷಣಾ ತಂಡ ಕೆಲಸ ಮಾಡುತ್ತಿದ್ದು ಯಾವುದು ಯಶಸ್ಸು ಸಿಗಲಿದೆ ಎಂಬುದು ಅಧಿಕಾರಿಗಳಿಗೂ ಪ್ರಶ್ನೆಯಾಗಿ ಉಳಿದಿದೆ.
ಸುರಂಗದ ಒಳಗೆ ಸಿಲುಕಿರುವ ಕಾರ್ಮಿಕರ ಮನಸ್ಥಿತಿ ಹತೋಟಿಗೆ ತರಲು ಸುರಂಗದೊಳಗೆ ಸಿಲುಕಿರುವ ಕಾರ್ಮಿಕರಿಗೆ ಮೊಬೈಲ್ ಫೋನ್, ಲೂಡೋ ಗೇಮ್ಸ್ ಆಡಲು ಬೋರ್ಡ್ ಕಳುಹಿಸಿ ಕೊಟ್ಟಿದ್ದಾರೆ ಇದರಿಂದ ಕಾರ್ಮಿಕರು ಮಾನಸಿಕವಾಗಿ ಸ್ತಿಮಿತದಲ್ಲಿರಲು ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಕ್ಷಣಾ ಕಾರ್ಯಾಚರಣೆ ವಿಳಂಬವಾದ ಹಿನ್ನೆಲೆಯಲ್ಲಿ ಕಾರ್ಮಿಕರು ಕುಗ್ಗದಂತೆ ಈ ನಿರ್ಧಾರಕ್ಕೆ ಬಂದಿದ್ದು, ಒಂದೆಡೆ ಕಾರ್ಯಾಚರಣೆ ಮುಂದುವರೆಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದ್ದು ಇನ್ನೊಂದೆಡೆ ಕಾರ್ಮಿಕರ ಸುರಕ್ಷತೆಯ ದೃಷ್ಟಿಯಿಂದ ಅವರ ಮಾನಸಿಕ ನೆಮ್ಮದಿಗೆ ಬೇಕಾದ ಮೂಲಭೂತ ಸೌಲಭ್ಯವನ್ನು ಒದಗಿಸುವತ್ತ ಅಧಿಕಾರಿಗಳು ಗಮನಹರಿಸಿದ್ದಾರೆ ಎನ್ನಲಾಗಿದೆ.
#WATCH | Uttarkashi (Uttarakhand) tunnel rescue | Latest visuals outside the tunnel where operation is underway to rescue the 41 workers who got trapped here on 12th November.
Preparation of protection umbrella is underway inside the tunnel where the people from the rescue team… pic.twitter.com/2eKPJGNuk4
— ANI (@ANI) November 26, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.