ನೀಟ್ ಮೆರಿಟ್ ಪ್ರಕಾರ ಖಾಸಗಿ ವೈದ್ಯಕೀಯ ಸೀಟು ತುಂಬಿ: ಸುಪ್ರೀಂ
Team Udayavani, May 25, 2018, 7:09 PM IST
ಹೊಸದಿಲ್ಲಿ : ಖಾಸಗಿ ಅನುದಾನರಹಿತ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಸ್ನಾತಕೋತ್ತರ ಸೀಟುಗಳನ್ನು ನೀಟ್ ಪರೀಕ್ಷೆಯ ಮೆರಿಟ್ ಕ್ರಮಾಂಕದ ಪ್ರಕಾರ ಭರ್ತಿ ಮಾಡಬಹುದೆಂಬ ಸಲಹೆಯನ್ನು ಸುಪ್ರೀಂ ಕೋರ್ಟ್ ಇಂದು ಒಪ್ಪಿಕೊಂಡಿತು.
ಖಾಸಗಿ ಅನುದಾನರಹಿತ ವೈದ್ಯಕೀಯ ಕಾಲೇಜುಗಳಲ್ಲಿ 2018-19ರ ಸಾಲಿನ ಸಾತ್ನಕೋತ್ತರ ವೈದ್ಯಕೀಯ ಸೀಟುಗಳು ಶೇ.41.95ರಷ್ಟು ಖಾಲಿ ಉಳಿದಿವೆ ಎಂದು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ) ಉತ್ತರ ಪ್ರದೇಶ ಪ್ರಕರಣವೊಂದರ ವಿಚಾರಣೆಯ ವೇಳೆ ಹೇಳಿರುವುದನ್ನು ಅನುಸರಿಸಿ ಜಸ್ಟಿಸ್ ಎ ಎಂ ಖಾನ್ವಿಲ್ಕರ್ ಮತ್ತು ಜಸ್ಟಿಸ್ ಇಂದೂ ಮಲ್ಹೋತ್ರ ಅವರನ್ನು ಒಳಗೊಂಡ ಪೀಠವು, ಈ ಖಾಲಿ ಸೀಟುಗಳನ್ನು ನೀಟ್ ಮೆರಿಟ್ ಲಿಸ್ಟ್ ಪ್ರಕಾರ ಭರ್ತಿ ಮಾಡಬಹುದೆಂಬ ಸಲಹೆಗೆ ಅನುಮೋದನೆ ನೀಡಿತು.
ಈ ಸಂದರ್ಭದಲ್ಲಿ ಕೇಂದ್ರದ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಪಿಂಕಿ ಆನಂದ್ ಅವರು “2018ರ ಮೇ 31ರ ಕಟ್ ಆಫ್ ದಿನಾಂಕಕ್ಕೆ ಬದ್ಧರಾಗಿ ಉಳಿಯವುದಿದ್ದರೆ ಇರ ರಾಜ್ಯಗಳು ಕೂಡ ಇದೇ ರೀತಿಯ ಕ್ರಮವನ್ನು ಅನುಸರಿಸಬಹುದು’ ಎಂದು ಹೇಳಿದರು.
ಈ ಸಲಹೆಯನ್ನು ನಾವು ಒಪ್ಪುತ್ತೇವೆ ಎಂದು ಹೇಳಿದ ಸುಪ್ರೀಂ ಪೀಠ, ಉತ್ತರ ಪ್ರದೇಶ ಅನುದಾನರಹಿತ ವೈದ್ಯಕೀಯ ಕಾಲೇಜುಗಳ ಕಲ್ಯಾಣ ಸಂಘ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.