ವರ್ಷಾಂತ್ಯದಿಂದ ವಿದೇಶಗಳಿಗೆ ಲಸಿಕೆ ರಫ್ತು; ಕೇಂದ್ರ ಸರ್ಕಾರದ ಘೋಷಣೆ
Team Udayavani, Oct 25, 2021, 10:15 PM IST
ನವದೆಹಲಿ: ವರ್ಷಾಂತ್ಯದಿಂದ ಇತರ ದೇಶಗಳಿಗೆ ಕೋವಿಡ್ ಲಸಿಕೆ ರಫ್ತು ಮಾಡಲಾಗುತ್ತದೆ. ಆದರೆ, ದೇಶದಲ್ಲಿ ಎಲ್ಲರಿಗೂ ಲಸಿಕೆ ಹಾಕುವ ಅಗತ್ಯವನ್ನು ಗಮನದಲ್ಲಿ ಇರಿಸಿಕೊಂಡು ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.
ಈ ವರ್ಷದ ಏಪ್ರಿಲ್‌ನಿಂದ ಇತರ ದೇಶಗಳಿಗೆ ಲಸಿಕೆ ರಫ್ತು ಮಾಡುವುದನ್ನು ಸ್ಥಗಿತಗೊಳಿಸಿತ್ತು. ಸದ್ಯ 18 ವರ್ಷದಿಂದ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದು ಕೇಂದ್ರ ಆದ್ಯತೆಯಾಗಿದೆ ಎಂದು ಆ ಅಧಿಕಾರಿ ತಿಳಿಸಿದ್ದಾರೆ.
ಸಕ್ರಿಯ ಕೇಸು ಇಳಿಕೆ:
ದೇಶದಲ್ಲಿ ಭಾನುವಾರದಿಂದ ಸೋಮವಾರದ ಅವಧಿಯಲ್ಲಿ 14,306 ಹೊಸ ಸೋಂಕು ಪ್ರಕರಣ ದೃಢಪಟ್ಟಿದೆ. 443 ಮಂದಿ ಸೋಂಕಿನಿಂದಾಗಿ ಅಸುನೀಗಿದ್ದಾರೆ. ಹೀಗಾಗಿ, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,54,712 ಮಂದಿ ಅಸುನೀಗಿದ್ದಾರೆ. ಕೇರಳದಲ್ಲಿ 24 ಗಂಟೆಗಳಲ್ಲಿ 71 ಮಂದಿ ಅಸುನೀಗಿದ್ದಾರೆ ಮತ್ತು ಈ ಹಿಂದೆ ಅಸುನೀಗಿದ್ದ 363 ಮಂದಿಯ ವಿವರವನ್ನೂ ಪರಿಷ್ಕರಿಸಿದೆ. ಸಕ್ರಿಯ ಸೋಂಕು ಸಂಖ್ಯೆ 1,67,695ಕ್ಕೆ ಇಳಿಕೆಯಾಗಿದೆ.
ಇದನ್ನೂ ಓದಿ:ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್
ಉ.ಪ್ರ.ಕ್ಕೆ ತಂಡ:
ಝಿಕಾ ವೈರಸ್ ಪತ್ತೆಯಾಗಿರುವ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಗೆ ಕೇಂದ್ರ ಸರ್ಕಾರ ಹಲವು ಕ್ಷೇತ್ರಗಳ ತಜ್ಞರು ಇರುವ ತಂಡವನ್ನು ಕಳುಹಿಸಿಕೊಟ್ಟಿದೆ. ಭಾನುವಾರ 57 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.