Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Team Udayavani, Oct 5, 2024, 12:33 PM IST
ಗುಜರಾತ್: ಗುಜರಾತ್‌ನ ವಡೋದರಾ ಮತ್ತು ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಘಟನೆ ಶನಿವಾರ ಸಂಭವಿಸಿದೆ.
ಶನಿವಾರ ಬೆಳಿಗ್ಗೆ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್‌ಎಫ್) ಗೆ ಇಮೇಲ್ ಮೂಲಕ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಬಂದಿದ್ದು ಅದರಂತೆ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದ್ದು ಕೂಡಲೇ ಅಲರ್ಟ್ ಆದ ಪೊಲೀಸರು ವಿಮಾನ ನಿಲ್ದಾಣವನ್ನು ತಪಾಸಣೆ ನಡೆಸಿದ್ದಾರೆ ಅಲ್ಲದೆ ಕೆಲ ಹೊತ್ತು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಎರಡೂ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ನಡೆಸಿದೆ ಆದರೆ ಎಲ್ಲೂ ಸ್ಫೋಟಕ ವಸ್ತುಗಳಾಗಲಿ ಅನುಮಾನಾಸ್ಪದ ವಸ್ತುಗಳಾಗಲಿ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ವಡೋದರಾ ಪೊಲೀಸ್ ಆಯುಕ್ತ ನರಸಿಂಹ ಕೋಮರ್ ಇತ್ತೀಚಿನ ದಿನಗಳಲ್ಲಿ ಶಾಲೆ, ಆಸ್ಪತ್ರೆ, ಬ್ಯಾಂಕ್, ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಗಳು ಬರುತ್ತಿದೆ, ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಎರಡೂ ವಿಮಾನ ನಿಲ್ದಾಣಗಳನ್ನು ಸಂಪೂರ್ಣ ತಪಾಸಣೆ ನಡೆಸಲಾಗಿದೆ ಆದರೆ ಎಲ್ಲೂ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ, ವಿಮಾನ ನಿಲ್ದಾಣ ಪ್ರಾಧಿಕಾರದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.