ಎನ್- 95 ಮಾಸ್ಕ್ ಬಳಕೆಯಿಂದ ಕೋವಿಡ್ ಸೋಂಕು ತಡೆಯಲು ಸಾಧ್ಯವಿಲ್ಲ: ಆರೋಗ್ಯ ಸಚಿವಾಲಯ
Team Udayavani, Jul 21, 2020, 4:59 PM IST
ಹೊಸದಿಲ್ಲಿ: ಕೋವಿಡ್-19 ಸೋಂಕು ದೇಹ ಪ್ರವೇಶಿಸುವುದನ್ನು ತಡೆಯಲು ಬಹುತೇಕರು ಬಳಸುವ ಗಾಳಿ ನಿಯಂತ್ರಣ ಕವಾಟವಿರುವ ಎನ್-95 ಮಾಸ್ಕ್ ನಿಂದ ಸೋಂಕು ತಡೆ ಅಸಾಧ್ಯ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಮತ್ತು ವೈದ್ಯಕೀಯ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯದ ಮಹಾನಿರ್ದೇಶಕ ರಾಜೀವ್ ಗರ್ಗ್ ಈ ಎಚ್ಚರಿಕೆ ನೀಡಿದ್ದಾರೆ.
ಎನ್ -95 ಮಾಸ್ಕ್ ಬಳಕೆಯಿಂದ ದೇಹಕ್ಕೆ ಕೋವಿಡ್ ಸೋಂಕು ಪ್ರವೇಶಿಸುವುದು ಮತ್ತು ದೇಹದಿಂದ ಹೊರಹೋಗುವುದನ್ನು ತಡೆಯಲು ಸಾಧ್ಯವಿಲ್ಲ. ಸಾರ್ವಜನಿಕರು ಎನ್ 95 ಮಾಸ್ಕ್ ಗಳನ್ನು ಸರಿಯಾದ ಕ್ರಮದಲ್ಲಿ ಬಳಕೆ ಮಾಡುತ್ತಿಲ್ಲ. ಇದರ ಬದಲು ಮನೆಯಲ್ಲಿಯೇ ಮಾಸ್ಕ್ ತಯಾರಿಸಿ ಬಳಸುವ ಕುರಿತು ಜನರಿಗೆ ಮಾಹಿತಿ ನೀಡಬೇಕು ಎಂದು ರಾಜೀವ್ ಗರ್ಗ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ತೊಳೆದು ಉಪಯೋಗಿಸುವಂತಹ ಮಾಸ್ಕ್ ಬಳಕೆ ಉತ್ತಮ ಎಂದಿರುವ ಆರೋಗ್ಯ ಸಚಿವಾಲಯ, ಮಾಸ್ಕ್ ಗಳನ್ನು ಸರಿಯಾಗಿ ಬಳಸಬೇಕು. ಒಬ್ಬರು ಬಳಸಿದ ಮಾಸ್ಕ್ ಗಳನ್ನು ಮತ್ತೊಬ್ಬರು ಬಳಸಬಾರದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.