Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?
Team Udayavani, May 14, 2024, 8:28 PM IST
ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಪ್ರಧಾನಿ ಮೋದಿಯವರ ಅಫಿಡವಿಟ್ ಪ್ರಕಾರ, ಅವರು 3.02 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ, 52,920 ರೂಪಾಯಿ ನಗದು ಹೊಂದಿದ್ದಾರೆ. ಅವರು ಜಮೀನು, ಮನೆ ಅಥವಾ ಕಾರು ಹೊಂದಿಲ್ಲ.
2018-19 ರ ಆರ್ಥಿಕ ವರ್ಷದಲ್ಲಿ 11 ಲಕ್ಷ ರೂಪಾಯಿಗಳಿಂದ 2022-23 ರಲ್ಲಿ 23.5 ಲಕ್ಷ ರೂಪಾಯಿಗಳಿಗೆ ಪಿಎಂ ಮೋದಿಯವರ ಆದಾಯವು ದ್ವಿಗುಣಗೊಂಡಿದೆ ಎಂದು ಅಫಿಡವಿಟ್ ತೋರಿಸುತ್ತದೆ.
ಪ್ರಧಾನಿ ಮೋದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಎರಡು ಖಾತೆಗಳನ್ನು ಹೊಂದಿದ್ದಾರೆ. ಎಸ್‌ಬಿಐನ ಗಾಂಧಿನಗರ ಶಾಖೆಯಲ್ಲಿ 73,304 ರೂ.ಗಳನ್ನು ಠೇವಣಿ ಇರಿಸಿದ್ದರೆ, ಎಸ್‌ಬಿಐನ ವಾರಣಾಸಿ ಶಾಖೆಯಲ್ಲಿ ಕೇವಲ 7,000 ರೂ ಇದೆ.
ಮೋದಿ ಅವರು ಎಸ್‌ಬಿಐನಲ್ಲಿ 2,85,60,338 ರೂ ಮೌಲ್ಯದ ಸ್ಥಿರ ಠೇವಣಿಯನ್ನೂ ಹೊಂದಿದ್ದಾರೆ. ಪ್ರಧಾನಿಯವರ ಬಳಿ 2,67,750 ರೂಪಾಯಿ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳಿವೆ.
2014 ರಲ್ಲಿ ವಾರಣಾಸಿಯಿಂದ ಎನ್‌ಡಿಎ ಪ್ರಧಾನಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಪಿಎಂ ಮೋದಿ, ಈ ಸ್ಥಾನದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ದಾರೆ, ಅಲ್ಲಿ ಜೂನ್ 1 ರಂದು ಏಳನೇ ಮತ್ತು ಅಂತಿಮ ಹಂತದ ಚುನಾವಣೆಯ ಮತದಾನ ನಡೆಯಲಿದೆ.
Filed my nomination papers as a candidate for the Varanasi Lok Sabha seat. It is an honour to serve the people of this historic seat. With the blessings of the people, there have been remarkable achievements over the last decade. This pace of work will get even faster in the… pic.twitter.com/QOgELYnnJg
— Narendra Modi (@narendramodi) May 14, 2024
ನಾಮಪತ್ರ ಸಲ್ಲಿಸುವ ಮುನ್ನ ಪ್ರಧಾನಿ ಮೋದಿ ಇಂದು ಬನಾರಸ್ ನ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಇದಾದ ಬಳಿಕ ಕಾಲಭೈರವ ದೇವಾಲಯಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕಾಲಭೈರವನ ದರ್ಶನದ ನಂತರ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಎಲ್ಜೆಪಿ-ರಾಮ್ ವಿಲಾಸ್ ಮುಖ್ಯಸ್ಥ ಚಿರಾಗ್ ಪಾಸ್ವಾನ್, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.