ಒಂದುವರೆ ವರ್ಷಕ್ಕೆ ತಾಯೀನ ಕಳಕೊಂಡೆ, ಬಿಜೆಪಿಯೇ ನನ್ನ ತಾಯಿ
Team Udayavani, Jul 18, 2017, 2:00 PM IST
ಹೊಸದಿಲ್ಲಿ : ಎನ್‌ಡಿಎ ಬೆಂಬಲಿತ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವೆಂಕಯ್ಯ ನಾಯ್ಡು ಬಿಜೆಪಿಯ ಚಟುವಟಿಕೆಯಿಂದ ದೂರವಾಗಬೇಕಾದ ಸಂದರ್ಭ ನನೆದು ಭಾವುಕರಾದರು. ನಾನು ಒಂದುವರೆ ವರ್ಷದವನಿದ್ದಾಗ ತಾಯಿಯನ್ನು ಕಳೆದುಕೊಂಡೆ, ಭಾರತೀಯ ಜನತಾ ಪಕ್ಷವೆ ನನ್ನನ್ನು ತಾಯಿಯಂತೆ ನೋಡಿಕೊಂಡು ಈ ಹಂತಕ್ಕೆ ತಲುಪುವಂತೆ ಮಾಡಿದೆ ಎಂದರು.
2019 ರಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೆ ಅಧಿಕಾರಕ್ಕೇರಿಸಿ ರಾಜಕೀಯ ನಿವೃತ್ತಿ ಪಡೆಯಬೇಕೆಂಬ ಆಶಯ ನನ್ನದಾಗಿತ್ತು, ಆದರೆ ವಿಧಿ ಬೇರೆಯದ್ದೇ ಆಗಿದೆ.ಮತ್ತೆ ಮೋದಿ ಅಧಿಕಾರಕ್ಕೆ ಬರುವ ಪೂರ್ಣ ವಿಶ್ವಾಸವಿದೆ ಎಂದರು.
ಭಾರತದ ಶಕ್ತಿ ಮತ್ತು ಸೌಂದರ್ಯ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಡಗಿದೆ. ಅದನ್ನು ಇನ್ನಷ್ಟು ಬಲಪಡಿಸಲು ನಾನು ಕೆಲಸ ಮಾಡುತ್ತೇನೆ. ನಾನು 40 ವರ್ಷಗಳ ರಾಜಕೀಯ ಜೀವನವನ್ನು ನೋಡಿದ್ದೇನೆ ಆದರೆ ಉಪರಾಷ್ಟ್ರಪತಿ ಕರ್ತವ್ಯ ನಿರ್ವಹಿಸುವುದು ಬೇರೆಯ ರೀತಿ ಹುದ್ದೆಯಾಗಿದೆ. ಆ ಸ್ಥಾನಕ್ಕೆ ನ್ಯಾಯ ಒದಗಿಸುತ್ತೇನೆ ಎಂದರು.
ಸೋಮವಾರ ವೆಂಕಯ್ಯ ನಾಯ್ಡು ಅವರನ್ನು ಬಿಜೆಪಿ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು. ಆ ತಕ್ಷಣ ನಾಯ್ಡು ಅವರು ಸಚಿವ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ ನರೇಂದ್ರ ಮೋದಿ , ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಚಿವೆ ಸುಷ್ಮಾ ಸ್ವರಾಜ್ ಮತ್ತಿತರ ಎನ್‌ಡಿಎ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.