NDA ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು ಕಣಕ್ಕೆ
Team Udayavani, Jul 17, 2017, 7:54 PM IST
ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗಾಗಿ ಕೇಂದ್ರದಲ್ಲಿ ಆಡಳಿತಾರೂಢ ಭಾರತೀಯ ಜನತಾಪಕ್ಷ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟವು ಹಾಲಿ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ವೆಂಕಯ್ಯ ನಾಯ್ಡು ಅವರನ್ನು ಕಣಕ್ಕಿಳಿಸಿದೆ. ಪ್ರಸ್ತುತ ನಾಯ್ಡು ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದಲ್ಲಿ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನ ಹಾಗೂ ಮಾಹಿತಿ ಮತ್ತು ಪ್ರಸಾರ ಸಜಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಸದೀಯ ಕಲಾಪ ವಿಚಾರಗಳಲ್ಲಿ ಉತ್ತಮ ಜ್ಞಾನವನ್ನು ಹೊಂದಿರುವ ವೆಂಕಯ್ಯ ನಾಯ್ಡು ಅವರು ಪ್ರತಿಪಕ್ಷಗಳೊಂದಿಗೆ ಆರೋಗ್ಯಕರ ಸಂಬಂಧವನ್ನು ಹೊಂದಿರುವ ರಾಜಕಾರಣಿಯಾಗಿ ದಿಲ್ಲಿ ಪಡಸಾಲೆಯಲ್ಲಿ ಗುರುತಿಸಿಕೊಂಡಿದ್ದಾರೆ.
ಸೋಮವಾರ ಸಾಯಂಕಾಲ ಬಿ.ಜೆ.ಪಿ.ಯ ಸಂಸದೀಯ ಮಂಡಳಿಯ ಸಭೆ ಮುಕ್ತಾಯಗೊಂಡ ಬಳಿಕ ವೆಂಕಯ್ಯ ನಾಯ್ಡು ಅವರ ಅಭ್ಯರ್ಥಿತನವನ್ನು ಬಹಿರಂಗಪಡಿಸಲಾಯಿತು. ಈ ವಿಷಯವನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ‘ನಮ್ಮ ಹಿರಿಯ ನಾಯಕ ಹಾಗೂ ಅನುಭವಿ ಮುತ್ಸದ್ದಿ ವೆಂಕಯ್ಯ ನಾಯ್ಡು ಅವರನ್ನು ಎನ್.ಡಿ.ಎ. ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ..’ ಎಂದು ಶಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಾಯ್ಡು ಅವರ ಅಭ್ಯರ್ಥಿತನವನ್ನು ಎನ್.ಡಿ.ಎ. ಮಿತ್ರಪಕ್ಷಗಳು ಬೆಂಬಲಿಸಿವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ನಾಮಪತ್ರ ಸಲ್ಲಿಸಲು ಜುಲೈ 18 ಅಂತಿಮ ದಿನಾಂಕವಾಗಿದೆ. ಆಗಸ್ಟ್ 05ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಹಾಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ಅಧಿಕಾರ ಅವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.