ಮಹಿಳೆಯರಿಗೆ ರಕ್ಷಣೆ ನೀಡುವುದು ಮಾತ್ರ ಕೆಲಸ,ವಯಸ್ಸು ನೋಡುವುದಿಲ್ಲ
Team Udayavani, Jan 2, 2019, 6:24 AM IST
ತಿರುವನಂತಪುರಂ: ಕಾನೂನು ವ್ಯಾಪ್ತಿಯಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವುದು ಮಾತ್ರ ಪೊಲೀಸರ ಕೆಲಸ. ನಾವು ವಯಸ್ಸು ಮತ್ತು ಇತರ ವಿವರಗಳು ನಮಖೆ ಮುಖ್ಯವಾಗುವುದಿಲ್ಲ ಎಂದು ಕೇರಳ ಡಿಜಿಪಿ ಲೋಕನಾಥ್ ಬೆಹ್ರಾ ಅವರು ಹೇಳಿಕೆ ನೀಡಿದ್ದಾರೆ.
ಶಬರಿಮಲೆಗೆ ಬುಧವಾರ ಇಬ್ಬರು ಮಹಿಳೆಯರು ಪ್ರವೇಶಿಸಿದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. ಯಾರು ಶಬರಿಮಲೆಗೆ ಬರುತ್ತಾರೋ ಅವರಿಗೆ ರಕ್ಷಣೆ ನೀಡಬೇಕಾದುದ್ದು ನಮ್ಮ ಕೆಲಸ. ಪೊಲೀಸರು ಅದನ್ನು ಮಾಡಿದ್ದಾರೆ ಎಂದರು.
ಸುಪ್ರೀಂ ಕೋರ್ಟ್ 10 ರಿಂದ 50 ವರ್ಷದ ಒಳಗಿನ ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂದು ತೀರ್ಪು ನೀಡಿದ ಬೆನ್ನಲ್ಲೇ ಶಬರಿ ಮಲೆಯಲ್ಲಿ ವ್ಯಾಪಕ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿತ್ತು. ಪೊಲೀಸರ ರಕ್ಷಣಾ ಕೋಟೆಗಳಿದ್ದರೂ ಮಹಿಳೆಯರಿಗೆ ದೇಗುಲ ಪ್ರವೇಶಿಸುವುದು ಸಾಧ್ಯವಾಗಿರಲ್ಲಿಲ್ಲ , ಆದರೆ ಬುಧವಾರ ನಸುಕಿನ 4 ಗಂಟೆಯ ಒಳಗೆ 40 ವರ್ಷದೊಳಗಿನ ಮಹಿಳೆಯರಾದ ಬಿಂದು ಮತ್ತು ಕನಕದುರ್ಗಾ ಅವರು ದೇಗುಲ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಕೇರಳದಲ್ಲಿ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.