ಕಂಬಳ ಓಟಗಾರ ಶ್ರೀನಿವಾಸ ಗೌಡರಿಗೆ ಉಪರಾಷ್ಟ್ರಪತಿ ಕನ್ನಡದಲ್ಲಿ ಶುಭ ಹಾರೈಕೆ
ಇಂಗ್ಲಿಷ್, ತೆಲುಗು ಭಾಷೆಯಲ್ಲೂ ಸಹ ಶ್ರೀನಿವಾಸ ಗೌಡರ ಸಾಧನೆಗೆ ಅಭಿನಂದನೆ ಸಲ್ಲಿಸಿದ ಉಪರಾಷ್ಟ್ರಪತಿ
Team Udayavani, Feb 16, 2020, 9:48 PM IST
ನವದೆಹಲಿ: ಕಂಬಳದ ಓಟದಲ್ಲಿ ಹೊಸ ದಾಖಲೆಯನ್ನು ಬರೆದು ಮಿಂಚಿದ ಮತ್ತು ತನ್ನ ಈ ದಾಖಲೆಯ ಓಟಕ್ಕಾಗಿ ಅತ್ಲೆಟಿಕ್ಸ್ ಜಗತ್ತಿನ ವೇಗದ ಓಟದ ದೊರೆ ಉಸೇನ್ ಬೋಲ್ಟ್ ಜೊತೆ ಹೋಲಿಸಲ್ಪಡುತ್ತಿರುವ ಶ್ರೀನಿವಾಸ ಗೌಡ ಅವರ ಈ ಸಾಧನೆಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ. ವಿಶೇಷವೆಂದರೆ ನಾಯ್ಡು ಅವರ ಟ್ವೀಟ್ ಕನ್ನಡದಲ್ಲೇ ಇದೆ.
ಕಂಬಳ ಸ್ಪರ್ಧೆಯ ವೇಳೆ ಅಪರೂಪದ ಸಾಧನೆ ಮಾಡಿ, ಉಸೇನ್ ಬೋಲ್ಟ್ ನೊಂದಿಗೆ ಹೋಲಿಸಲ್ಪಡುತ್ತಿರುವ ಕರ್ನಾಟಕದ ಶ್ರೀನಿವಾಸ ಗೌಡ ಕೀರ್ತಿ ಪಡೆದಿದ್ದಾರೆ. ದೇಶದಲ್ಲಿ ಸಾಕಷ್ಟು ಸುಪ್ತ ಪ್ರತಿಭೆಗಳಿದ್ದು, ಅವರ ಪೂರ್ಣ ಸಾಮರ್ಥ್ಯದ ಸಾಕಾರಕ್ಕಾಗಿ ಅದನ್ನು ತಿಳಿಯುವ, ಮನ್ನಣೆ ನೀಡುವ, ಗೌರವಿಸುವ ಮತ್ತು ಪೋಷಿಸುವ ಅಗತ್ಯವಿದೆ.#SrinivasaGowda #UsainBolt pic.twitter.com/2KMe2kRisW
— Vice President of India (@VPSecretariat) February 16, 2020
‘ಕಂಬಳ ಸ್ಪರ್ಧೆಯಲ್ಲಿ ವಿಶೇಷ ಸಾಧನೆ ಮಾಡಿ ಉಸೇನ್ ಬೋಲ್ಟ್ ನೊಂದಿಗೆ ಹೋಲಿಸಲ್ಪಡುತ್ತಿರುವ ಕರ್ನಾಟಕದ ಶ್ರೀನಿವಾಸ ಗೌಡ ಕೀರ್ತಿ ಪಡೆದಿದ್ದಾರೆ. ದೇಶದಲ್ಲಿ ಸಾಕಷ್ಟು ಸುಪ್ತ ಪ್ರತಿಭೆಗಳಿದ್ದು ಅವರ ಪೂರ್ಣ ಸಾಮರ್ಥ್ಯದ ಸಾಕಾರಕ್ಕಾಗಿ ಅದನ್ನು ತಿಳಿಯುವ, ಮನ್ನಣೆ ನೀಡುವ, ಗೌರವಿಸುವ ಮತ್ತು ಪೋಷಿಸುವ ಅಗತ್ಯವಿದೆ’ ಎಂದು ಉಪರಾಷ್ಟ್ರಪತಿ ಅವರು ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಶ್ರೀನಿವಾಸ ಗೌಡ ಅವರ ಸಾಧನೆಯನ್ನು ಅಭಿನಂದಿಸುವ ಟ್ವೀಟ್ ಅನ್ನು ಕನ್ನಡದಲ್ಲಿ ಮಾತ್ರವಲ್ಲದೇ ಇಂಗ್ಲಿಷ್ ಹಾಗೂ ತೆಲುಗು ಭಾಷೆಯಲ್ಲೂ ಸಹ ನಾಯ್ಡು ಅವರು ಬರೆದು ಪೋಸ್ಟ್ ಮಾಡಿರುವುದು ಇನ್ನೊಂದು ವಿಶೇಷ.
Kudos to Karnataka’s #SrinivasaGowda for achieving a rare feat during a Buffalo Race and being compared to Usain Bolt. There is a lot of hidden talent in the country which needs to be recognized, respected and to be nurtured to realise the full potential. #Kambala #UsainBolt pic.twitter.com/ugtHawK1wV
— Vice President of India (@VPSecretariat) February 16, 2020
ప్రపంచఛాంపియన్ ఉసేన్ బోల్ట్ ను మించిన ప్రదర్శనను కనబరిచిన కన్నడ యువకుడు శ్రీ శ్రీనివాస గౌడ సామర్థ్యానికి మరింత మెరుగులు దిద్దేందుకు భారత క్రీడా ప్రాధికార సంస్థ (సాయ్) ముందుకు రావడాన్ని అభినందిస్తున్నాను. #Kambala #UsainBolt pic.twitter.com/ixSlGyaMWm
— Vice President of India (@VPSecretariat) February 16, 2020
ಇದೇ ಸಂದರ್ಭದಲ್ಲಿ ಶ್ರೀನಿವಾಸ ಗೌಡ ಅವರ ಸಾಧನೆಯನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಲು ವ್ಯವಸ್ಥೆ ಮಾಡಿಕೊಟ್ಟಿರುವ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರಿಗೂ ಉಪರಾಷ್ಟ್ರಪತಿಗಳು ಇದೇ ಸಂದರ್ಭದಲ್ಲಿ ಇನ್ನೊಂದು ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
My compliments to Shri Kiren Rijiju, Union Minister for sports, for acknowledging Srinivasa’s talent and offering him the requisite training to hone his skills for #Olympics. @KirenRijiju #sports #Karnataka
— Vice President of India (@VPSecretariat) February 16, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.