Delhi ಬೆಂಕಿ ಅವಘಡ; ಕಟ್ಟಡದಿಂದ ಜಿಗಿದು ಪಾರಾದ ವಿದ್ಯಾರ್ಥಿಗಳು: Video
Team Udayavani, Jun 15, 2023, 4:38 PM IST
ಹೊಸದಿಲ್ಲಿ : ದೆಹಲಿಯ ಮುಖರ್ಜಿ ನಗರದಲ್ಲಿ ಗುರುವಾರ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ನಂತರ ಕೋಚಿಂಗ್ ಸೆಂಟರ್‌ನ ಒಳಗಿದ್ದ ವಿದ್ಯಾರ್ಥಿಗಳು ಕಟ್ಟಡದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಮಧ್ಯಾಹ್ನ 12.30ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೇಲಿನ ಮಹಡಿಯಿಂದ ಹೊಗೆ ಹೊರಬರುತ್ತಿರುವುದನ್ನು ಮತ್ತು ವಿದ್ಯಾರ್ಥಿಗಳು ತಮ್ಮ ಬೆನ್ನಿನ ಮೇಲೆ ಬ್ಯಾಗ್‌ಗಳನ್ನು ಹಾಕಿಕೊಂಡು ತಂತಿಗಳನ್ನು ಬಳಸಿ ಕೆಳಗೆ ಹಾರುತ್ತಿರುವುದನ್ನು ದೃಶ್ಯಗಳು ತೋರಿಸಿವೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಕೆಳಗಿಳಿಯುವಾಗ ಇತರ ಮಹಡಿಗಳಲ್ಲಿ ಅಳವಡಿಸಲಾದ ಎಸಿಗಳನ್ನೂ ಸಹ ಬಳಸಿಕೊಂಡು ಪ್ರಾಣ ಉಳಿಸಿಕೊಂಡರು.
Massive fire breaks out in Delhi’s Mukherjee Nagar inside a Coaching Centre. Brave students escape through windows climbing down using wires. This calls for audit of all such buildings. Was there proper fire safety equipment and escape routes? Sad visuals but a lesson for Govt. pic.twitter.com/hwZMeYfeEu
— Aditya Raj Kaul (@AdityaRajKaul) June 15, 2023
11 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಅಧಿಕಾರಿಗಳು ವಿದ್ಯಾರ್ಥಿಗಳನ್ನು ಅಪಾಯದಿಂದ ಪಾರು ಮಾಡಲು ಸಹಾಯ ಮಾಡಿದರು. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದಿಲ್ಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ವಿದ್ಯುತ್ ಮೀಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಉಪಕರಣದಿಂದ ಹೊರಹೊಮ್ಮುವ ಹೊಗೆಯಿಂದಾಗಿ ವಿದ್ಯಾರ್ಥಿಗಳು ಭಯಭೀತರಾದರು ಮತ್ತು ಕೋಚಿಂಗ್ ಸೆಂಟರ್‌ನ ಹಿಂಭಾಗದಿಂದ ಕೆಳಗೆ ಇಳಿಯಲು ಪ್ರಾರಂಭಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.