Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Team Udayavani, Sep 7, 2024, 3:08 PM IST
ಪುಣೆ: ಹೋಟೆಲ್ ನಲ್ಲಿ ಆಹಾರ ಕೊಡಲು ನಿರಾಕರಿಸಿದ್ದಾರೆಂದು ಸಿಟ್ಟಿಗೆದ್ದ ಚಾಲಕನೋರ್ವ ತನ್ನ ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಆಘಾತಕಾರಿ ಘಟನೆಯೊಂದು ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಪುಣೆ ಜಿಲ್ಲೆಯ ಇಂದ್ರಾಪುರದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಪುಣೆ-ಸೋಲಾಪುರ ಹೆದ್ದಾರಿಯ ಹಿಂಗಂಗಾವ್‌ನಲ್ಲಿರುವ ಹೊಟೇಲ್ ಗೋಕುಲ್ ರೆಸ್ಟೋರೆಂಟ್ ಗೆ ಲಾರಿ ಚಾಲಕ ಊಟ ಮಾಡಲೆಂದು ಬಂದಿದ್ದಾನೆ ಅಲ್ಲದೆ ತಡವಾಗಿದ್ದರಿಂದ ಹೋಟೆಲ್ ಸಿಬ್ಬಂದಿ ಊಟ ಮುಗಿದಿದೆ ಎಂದು ಹೇಳಿದ್ದಾರೆ ಇಷ್ಟಕ್ಕೆ ಸಿಟ್ಟಾದ ಲಾರಿ ಚಾಲಕ ತನ್ನ ಲಾರಿಯನ್ನು ಹೋಟೆಲ್ ಕಟ್ಟಡದಕ್ಕೆ ಡಿಕ್ಕಿ ಹೊಡೆದಿದ್ದಾನೆ ಅಲ್ಲದೆ ಹೋಟೆಲ್ ಹೊರಗಡೆ ಇದ್ದ ಕಾರು ಬೈಕುಗಳಿಗೆ ಗುದ್ದಿ ಜಖಂಗೊಳಿಸಿದ್ದಾನೆ ಇಷ್ಟಾಗುತ್ತಲೇ ಅಲ್ಲಿದ್ದ ಜನರು ಲಾರಿಯನ್ನು ನಿಲ್ಲಿಸಲು ಯತ್ನಿಸಿದ್ದಾರೆ ಈ ವೇಳೆ ನಿಲ್ಲಿಸದೆ ಮತ್ತೆ ಮತ್ತೆ ಹೋಟೆಲ್ ಕಟ್ಟಡಕ್ಕೆ ಲಾರಿಯನ್ನು ಡಿಕ್ಕಿ ಹೊಡೆಸಿದ್ದಾನೆ.
ಲಾರಿ ಚಾಲಕನ ಅವಾಂತ ಅಲ್ಲಿನ ಜನ ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಸಲಿಗೆ ಲಾರಿ ಚಾಲಕ ಪಾನಮತ್ತನಾಗಿದ್ದ ಎಂದು ಹೇಳಲಾಗಿದೆ ಕೊನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದನ್ನು ಕಂಡ ಲಾರಿ ಚಾಲಕ ಇನ್ನು ನನಗೆ ಉಳಿಗಾಲ ಇಲ್ಲ ಎಂದು ತಿಳಿದು ಲಾರಿಯನ್ನು ನಿಲ್ಲಿಸಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ, ಆದರೆ ಚಾಲಕನ ಆಟಾಟೋಪಕ್ಕೆ ಎರಡು ಕಾರು ಎರಡು ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದ್ದು ಲಾರಿ ಚಾಲಕನ ವಿರುದ್ಧ ದೂರು ದಾಖಲಾಗಿದೆ.
ಇದನ್ನೂ ಓದಿ: Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
#Pune: Drunk Driver Crashes Truck Into Hotel After Food Denial, Damages Vehicles, Watch Video https://t.co/AdGuLvtIlo pic.twitter.com/23c1cXp7T0
— Pune Pulse (@pulse_pune) September 7, 2024
VIDEO | Maharashtra: A truck driver rammed his vehicle into a hotel building in #Pune after he was reportedly denied food. The truck driver was allegedly drunk. The incident took place on Friday night.#PuneNews #maharashtranews
(Source: Third Party)
(Full video available on… pic.twitter.com/TrPEF1ZxrA
— Press Trust of India (@PTI_News) September 7, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.