ನಾನು ಸ್ವರ್ಗದಲ್ಲಿ ಸಂತೋಷವಾಗಿದ್ದೇನೆ… ಜೈಲಿನಲ್ಲಿದ್ದುಕೊಂಡೇ ಲೈವ್ ವಿಡಿಯೋ ಮಾಡಿದ ಆರೋಪಿ
Team Udayavani, Mar 15, 2024, 3:56 PM IST
ಉತ್ತರಪ್ರದೇಶ: ಕೊಲೆ ಪ್ರಕರಣದಲ್ಲಿ ಉತ್ತರಪ್ರದೇಶದ ಬರೇಲಿಯ ಕೇಂದ್ರ ಕಾರಾಗ್ರಹದಲ್ಲಿ ಕಂಬಿ ಎಣಿಸುತ್ತಿರುವ ಆರೋಪಿಯೋರ್ವ ಜೈಲಿನಲ್ಲಿ ಇದ್ದುಕೊಂಡೇ ಲೈವ್ ವಿಡಿಯೋ ಹರಿಬಿಟ್ಟ ಘಟನೆ ಬೆಳಕಿಗೆ ಬಂದಿದ್ದು ಇದರ ಬೆನ್ನಲ್ಲೇ ಜೈಲಿನಲ್ಲಿ ಆರೋಪಿಗಳಿಗೆ ಯಾವ ರೀತಿಯ ಅನುಕೂಲಗಳು ಸಿಗುತ್ತವೆ ಎಂಬ ಕುರಿತು ಸಾರ್ವಜನಿಕರಲ್ಲಿ ಅನುಮಾನಗಳು ಕಾಡತೊಡಗಿದೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ಪ್ರಕರಣದ ಬಗ್ಗೆ ತನಿಖೆ ನಡೆಸಿ ಒಂದು ವೇಳೆ ಜೈಲು ಅಧಿಕಾರಿಗಳು ತಪ್ಪು ಎಸಗಿರುವುದು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಏನಿದು ಪ್ರಕರಣ:
2019 ರ ಡಿಸೆಂಬರ್ 2 ರಂದು ದೆಹಲಿಯ ಶಹಜಾನ್‌ಪುರದ ಸದರ್ ಬಜಾರ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಗುತ್ತಿಗೆದಾರ ರಾಕೇಶ್ ಯಾದವ್ (34) ಅವರನ್ನು ಹಾಡಹಗಲೇ ಗುಂಡಿಕ್ಕಿ ಕೊಂದ ಆರೋಪಿಯಾಗಿರುವ ಆಸಿಫ್ ನನ್ನ ಬಂಧಿಸಿ ಉತ್ತರಪ್ರದೇಶದ ಬರೇಲಿಯ ಕೇಂದ್ರ ಕಾರಾಗ್ರಹದಲ್ಲಿ ಇರಿಸಲಾಗಿದೆ ಇದೀಗ ಆತ ಜೈಲಿನಲ್ಲಿ ಇದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಎರಡು ನಿಮಿಷಗಳ ವಿಡಿಯೋ ಒಂದು ಹರಿಬಿಟ್ಟಿದ್ದಾನೆ ಅದರಲ್ಲಿ ನಾನು ಸ್ವರ್ಗದಲ್ಲಿದ್ದು ಎಂಜಾಯ್ ಮಾಡುತಿದ್ದೇನೆ ಇನ್ನು ಕೆಲವೇ ದಿನದಲ್ಲಿ ಹೊರಗೆ ಬರಲಿದ್ದೇನೆ ಎಂದು ಹೇಳುವ ವಿಡಿಯೋ ವೈರಲ್ ಆಗಿದೆ.
ಈ ವಿಡಿಯೋ ಲೈವ್ ಆಗುತ್ತಿದ್ದಂತೆ ರಾಕೇಶ್ ಯಾದವ್ ಅವರ ಸಹೋದರ ಜಿಲ್ಲಾಧಿಕಾರಿ ಉಮೇಶ್ ಪ್ರತಾಪ್ ಸಿಂಗ್ ಅವರನ್ನು ಭೇಟಿ ಮಾಡಿ ಜೈಲಿನಲ್ಲಿರುವ ಆರೋಪಿಗಳಿಗೆ ಉತ್ತಮ ಸೌಲಭ್ಯ ನೀಡಲಾಗುತ್ತಿದೆ ಅಲ್ಲದೆ ಅವರಿಗೆ ಬೇಕಾದ ಮೊಬೈಲ್ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ ಎಂದು ದೂರು ನೀಡಿದ್ದಾರೆ.
ಸದ್ಯ ಈ ವಿಡಿಯೋ ಕುರಿತು ಮಾಹಿತಿ ನೀಡಿದ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಕುಂತಲ್ ಕಿಶೋರ್ ಜೈಲಿನಲ್ಲಿ ಮಾಡಿದ್ದಾರೆ ಎನ್ನಲಾದ ವಿಡಿಯೋ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
रामराज्य हैं
उत्तर प्रदेश बरेली जेल में बन्द जेल में बंद आरोपी का वीडियो वायरल PWD ठेकेदार हत्याकांड का आरोपी जेल में है बंद जेल में बंद आरोपी का लाइव वीडियो चैट वायरल,, pic.twitter.com/8yZOg1m2xK— Mαɳιʂԋ Kυɱαɾ αԃʋσƈαƚҽ 🇮🇳🇮🇳 (@Manishkumarttp) March 14, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.