ಅತ್ಯಾಚಾರ ಎಸಗಿದ ಆರೋಪಿಗಳ ಜೊತೆ ಸಂತ್ರಸ್ತೆಯ ಮೆರವಣಿಗೆ..!
Team Udayavani, Mar 29, 2021, 2:05 PM IST
ಭೋಪಾಲ್ : ದಿನದಿಂದ ದಿನಕ್ಕೆ ಮನುಷ್ಯ ಎಷ್ಟು ಕ್ರೂರಿಯಾಗುತ್ತಿದ್ದಾನೆ ಎಂಬುದಕ್ಕೆ ಮಧ್ಯಪ್ರದೇಶದಲ್ಲಿ ನಡೆದ ಈ ಮನ ಕಲಕುವ ಘಟನೆಯೇ ಸಾಕ್ಷಿ. ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತೆಯನ್ನು ಆರೋಪಿಗಳ ಜೊತೆ ಕಟ್ಟಿ ಮೆರವಣಿಗೆ ಮಾಡಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ.
ಮಧ್ಯಪ್ರದೇಶದ ಭೋಪಾಲ್ ನಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಅಲಿರಾಜಪುರ ಎಂಬಲ್ಲಿ ಘಟನೆ ನಡೆದಿದೆ. ಬುಡಕಟ್ಟು ಜನರೇ ಹೆಚ್ಚಿರುವ ಈ ಗ್ರಾಮದಲ್ಲಿ 16 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿದೆ.
ಮತ್ತೊಂದು ಹೃದಯ ಮರುಗುವ ವಿಚಾರ ಏನೆಂದರೆ, ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿ ಕುಟುಂಬ ಸದಸ್ಯರೂ ಕೂರ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ತಮ್ಮ ಮಗಳಿಂದ ಮರ್ಯಾದೆ ಹಾಳಾಗಿದೆ ಎಂಬ ಕಾರಣಕ್ಕೆ ಈ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮೆರವಣಿಗೆ ವೇಳೆ ಭಾರತ್ ಮಾತಾಕಿ ಜೈ ಎಂದು ಕೂಗಲಾಗಿದೆ.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಅಪ್ರಾಪ್ತೆಯನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಆ ಬಾಲಕಿ ಕುಟುಂಬಸ್ಥರು ಸೇರಿದಂತೆ ಕೆಲವರ ಮೇಲೆ ದೂರು ದಾಖಲಾಗಿದೆ. ಅಲ್ಲದೆ ಅತ್ಯಾಚಾರದಲ್ಲಿ ಭಾಗಿಯಾಗಿದ್ದ ಇಬ್ಬರು ಯುವಕರ ಮೇಲೂ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.