![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 24, 2022, 8:41 AM IST
ಹೊಸದಿಲ್ಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ವಿನಯ್ ಕುಮಾರ್ ಸಕ್ಸೇನಾ ಅವರನ್ನು ಎನ್‌ಸಿಟಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕಳೆದ ವಾರ, ಹಲವಾರು ವಿಷಯಗಳಲ್ಲಿ ದೆಹಲಿ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಮೇ 23ರ ಸೋಮವಾರದಂದು ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.
ವಿನಯ್ ಸಕ್ಸೇನಾ ಅವರನ್ನು ಹುದ್ದೆಗೆ ನೇಮಿಸಿದ ನಂತರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡಿದ್ದಾರೆ. “ನಾನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರೊಂದಿಗೆ ಹಲವಾರು ವಿಷಯಗಳಲ್ಲಿ ಕೆಲಸ ಮಾಡಿದ್ದೇನೆ ಮತ್ತು ದೆಹಲಿಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದೇನೆ. ಅವರು ಬಹಳ ಒಳ್ಳೆಯ ವ್ಯಕ್ತಿ. ನಾನು ಅವರಿಗೆ ಭವಿಷ್ಯಕ್ಕಾಗಿ ಶುಭ ಹಾರೈಸುತ್ತೇನೆ ಮತ್ತು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಬಯಸುತ್ತೇನೆ.” ಎಂದಿದ್ದಾರೆ.
ಇದನ್ನೂ ಓದಿ:ಕುಳಿಯೊಳಗೆ ನಿಗೂಢ ಅರಣ್ಯ ಪತ್ತೆ! ಇಲ್ಲಿವೆ 130 ಮೀ. ಎತ್ತರದ ಮರಗಳು, ಚೀನಾದಲ್ಲೊಂದು ವಿಸ್ಮಯ
ಅವರು ಹೊಸದಾಗಿ ನೇಮಕಗೊಂಡ ದೆಹಲಿ ಎಲ್‌ಜಿಗೆ ಸ್ವಾಗತ ಕೋರಿದ್ದಾರೆ. “ದೆಹಲಿಯ ಜನರ ಪರವಾಗಿ ನಾನು ಹೊಸದಾಗಿ ನೇಮಕಗೊಂಡ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ದೆಹಲಿಯ ಒಳಿತಿಗಾಗಿ ದೆಹಲಿ ಸರ್ಕಾರದ ಸಂಪುಟದಿಂದ ಸಂಪೂರ್ಣ ಸಹಕಾರ ಪಡೆಯಲಿದ್ದಾರೆ” ಎಂದು ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.
दिल्ली के उपराज्यपाल रहे श्री अनिल बैजल जी के साथ मिलकर दिल्ली में कई काम किए और कई समस्याओं को ठीक करने की कोशिश की। वे एक बेहद अच्छे इंसान हैं। भविष्य के लिए मैं उन्हें शुभकामनाएं देता हूं और उनके अच्छे स्वास्थ्य और लंबी आयु की कामना करता हूं।
— Arvind Kejriwal (@ArvindKejriwal) May 23, 2022
ಮಾರ್ಚ್ 23, 1958 ರಂದು ಜನಿಸಿದ ವಿನಯ್ ಕುಮಾರ್ ಸಕ್ಸೇನಾ ಅವರು ಕಾನ್ಪುರ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ. ಇತ್ತೀಚಿನವರೆಗೂ ಅವರು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಅಧ್ಯಕ್ಷರಾಗಿದ್ದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.