Manipur ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ಕಾಳಗದಲ್ಲಿ 4 ಸಾವು
Team Udayavani, Aug 12, 2024, 12:46 AM IST
ಇಂಫಾಲ್: ಸಂಘರ್ಷ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ತೆಂಗನೌಪಾಲ್ ಜಿಲ್ಲೆಯಲ್ಲಿ ಯುನೈಟೆಡ್ ಕುಕಿ ಲಿಬರೇಶನ್ ಫ್ರಂಟ್ (ಯುಕೆಎಲ್ಎಫ್) ಬಂಡುಕೋರರು, ಕುಕಿ ಸಮುದಾಯಕ್ಕೆ ಸೇರಿದ ಗ್ರಾಮಸ್ಥರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಹಣ ವಸೂಲಾತಿ ಸಂಬಂಧಿಸಿದಂತೆ ಬಂಡುಕೋರರು ಹಾಗೂ ಗ್ರಾಮಸ್ಥರ ನಡುವೆ ಜಟಾಪಟಿ ನಡೆದಿದ್ದೇ ಘಟನೆಗೆ ಕಾರಣವಿರಬಹುದು ಎಂದು ಪೊಲೀ ಸರು ಶಂಕೆ ವ್ಯಕ್ತಪಡಿಸಿದ್ದಾರೆ. ದಾಳಿ ವೇಳೆ ಓರ್ವ ಬಂಡುಕೋರ ಮತ್ತು ಮೂವರು ಗ್ರಾಮಸ್ಥರು ಮೃತಪಟ್ಟಿದ್ದಾರೆ. ಗ್ರಾಮಸ್ಥರ ಸಾವಿಗೆ ಪ್ರತೀಕಾರವಾಗಿ ಯುಕೆಎಲ್ಎಫ್ನ ಮುಖ್ಯಸ್ಥನ ನಿವಾಸಕ್ಕೆ ಜನರು ಬೆಂಕಿ ಹಚ್ಚಿದ್ದಾರೆ.
ಮಾಜಿ ಶಾಸಕರ ಪತ್ನಿ ಸಾವು: ಕಾಂಗ್ಪೋಕಪಿ ಜಿಲ್ಲೆಯ ಸೈಕುಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಯಾಮ್ತೋಂಗ್ ಹಾಕಿಪ್ ಅವರ ನಿವಾಸದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಅವರ ಪತ್ನಿ ಸಪಂ ಚಾರುಬಾಲಾ ಮೃತಪಟ್ಟಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ನಡುವೆ, ಬಂಗ್ಲೋನ್ ಎಂಬಲ್ಲಿ ಕುಕಿ ಉಗ್ರರ ಅಡಗುತಾಣವನ್ನು ಬಿಎಸ್ಎಫ್ ಯೋಧರು ನಾಶಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.