ದೆಹಲಿ ಹಿಂಸಾಚಾರ: ಮೃತರ ಸಂಖ್ಯೆ 34ಕ್ಕೆ ಏರಿಕೆ, ಶಾಂತಿ ಕಾಪಾಡಲು ಮನವಿ
Team Udayavani, Feb 27, 2020, 1:25 PM IST
ದೆಹಲಿ: ನವದೆಹಲಿಯ ಈಶಾನ್ಯ ಭಾಗದಲ್ಲಿ ಸಿಎಎ ಮತ್ತು ಎನ್ ಆರ್ ಸಿ ಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಸಾವಿನ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ದೆಹಲಿ ಆರೋಗ್ಯ ಸಂಸ್ಥೆಯ ಮಾಹಿತಿ ಪ್ರಕಾರ ಈಗಾಗಲೇ ಮೃತರ ಸಂಖ್ಯೆ 34 ಕ್ಕೆ ಏರಿಕೆಯಾಗಿದ್ದು 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು ಹಲವೆಡೆ ಅಗ್ನಿಶಾಮಕದಳದ ನಿಯೋಜನೆ ಮಾಡಲಾಗಿದೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಿಂಸಾಚಾರಕ್ಕೆ ತುತ್ತಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಅನೇಕರು ಹಿಂಸಾಚಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜನತೆಗೆ ಶಾಂತಿಯಿಂದಿರುವಂತೆ ಕರೆ ನೀಡಿದ್ದಾರೆ. ಮಾತ್ರವಲ್ಲದೆ ದಿಲ್ಲಿ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಕೂಡ ಹಿಂಸಾಚಾರವನ್ನು ತಹಬಂದಿಗೆ ತರುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮತ್ತು ಸರಕಾರಗಳಿಗೆ ಸೂಚಿಸಿವೆ.
ಹೊಸದಾಗಿ ನೇಮಕಗೊಂಡ ಪೊಲೀಸ್ ವಿಶೇಷ ಆಯುಕ್ತ ( ಕಾನೂನು ಮತ್ತು ಸುವ್ಯವಸ್ಥೆ) ಎಸ್, ಎನ್ ಶ್ರೀವಾಸ್ತವ ಈಶಾನ್ಯ ದಿಲ್ಲಿಯಲ್ಲಿನ ಪರಿಸ್ಥಿತಿ ನಿಯಂತ್ರಿಸಲು ಸ್ವತಃ ಸ್ಥಳಕ್ಕೆ ತೆರಳಿದ್ದಾರೆ. ಜಪ್ರಬಾದ್, ಬಾಬರ್ ಪುರ್, ಗೋಕುಲ್ ಪುರಿ, ಶಿವ ವಿಹಾರ್ ಮೊದಲಾದ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಬುಧವಾರ ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.